ವ್ಯಕ್ತಿ ಕಾಣೆ: ಪತ್ತೆಗೆ ಮನವಿ
Eriswamy missing: Appeal to find
ಬಳ್ಳಾರಿ 17: ನಗರದ ರಾಣಿತೋಟ ಬಡಾವಣೆಯ ಅಂಗನವಾಡಿ ಶಾಲೆ ಹತ್ತಿರದ ನಿವಾಸಿ ಎರಿ್ರಸ್ವಾಮಿ ಎನ್ನುವ 50 ವರ್ಷದ ವ್ಯಕ್ತಿಯು ಜು.10 ರಂದು ಕಾಣೆಯಾಗಿದ್ದು, ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5.5 ಅಡಿ ಎತ್ತರ, ದುಂಡುಮುಖ, ಬಿಳಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಎರಡು ಹುಬ್ಬುಗಳ ಮೇಲೆ ಮತ್ತು ಬಲ ದವಡೆ ಮೇಲೆ ಹಳೆ ಗಾಯದ ಗುರುತು ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅರ್ಧ ತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 