ವಚನ ಸಾಹಿತ್ಯ ಸಂರಕ್ಷಣೆಗೆ ಫ.ಗು. ಹಳಕಟ್ಟಿ ಕೊಡುಗೆ ಅಪಾರ
F.G. Halakatti's contribution to the preservation of Vachana literature is immense
ಲೋಕದರ್ಶನ ವರದಿ
ಬಳ್ಳಾರಿ 02: ಹನ್ನೆರಡನೇ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ಚಲ್ಲಾಪಿಲ್ಲಿಯಾಗಿ ಕಣ್ಮರೆಯಾಗುತ್ತಿದ್ದ ವಚನ ಸಾಹಿತ್ಯವನ್ನು ಮರುಸಂಗ್ರಹಿಸಿ, ಸಂಪಾದಿಸಿ, ಪ್ರಕಟಿಸುವ ಮೂಲಕ ಕನ್ನಡ ಜನತೆಗೆ ವಚನಗಳ ಬೆಳಕನ್ನು ನೀಡಿದ ‘ವಚನ ಪಿತಾಮಹ' ಡಾ. ಫಕೀರ್ಪ ಗುರುಬಸಪ್ಪ ಹಳಕಟ್ಟಿ ಅವರ ಕೊಡುಗೆ ಅಪಾರ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ಧರಾಮ ಕಲ್ಮಠ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಗುರುವಾರ ಏರಿ್ಡಸಿದ್ದ ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು.
12 ನೇ ಶತಮಾನದಲ್ಲಿ ಬಸವಾದಿ ಶರಣರು ಅನುಭವ ಮಂಟಪದಲ್ಲಿ ಅಪಾರ ಪ್ರಮಾಣದ ವಚನ ಸಾಹಿತ್ಯವನ್ನು ಸೃಷ್ಟಿಸಿದ್ದರು. ಆದರೆ ಕಲ್ಯಾಣ ಕ್ರಾಂತಿಯ ನಂತರ, ಶರಣರನ್ನು ಹಿಮ್ಮೆಟ್ಟಿಸುವ ಹಾಗೂ ವಚನಗಳನ್ನು ನಾಶಮಾಡುವ ಸಂಚು ನಡೆದಾಗ ವಚನಗಳನ್ನು ರಕ್ಷಿಸುವ ಕಾರ್ಯವನ್ನು ಫ. ಗು. ಹಳಕಟ್ಟಿಯವರು ಕೈಗೆತ್ತಿಕೊಂಡಿದ್ದವರು ಎಂದು ತಿಳಿಸಿದರು.
19 ನೇ ಶತಮಾನದ ಆರಂಭದಲ್ಲಿ ಕೇವಲ 25 ವಚನಕಾರರ ಬೆರಳೆಣಿಕೆಯಷ್ಟು ವಚನಗಳು ಮಾತ್ರ ಬೆಳಕಿನಲ್ಲಿದ್ದವು. ಅಂತಹ ಸಂದರ್ಭದಲ್ಲಿ ಹಳಕಟ್ಟಿಯವರು ಸುಮಾರು 22,000 ವಚನಗಳನ್ನು ದೇಶದ ಮೂಲೆ ಮೂಲೆಗಳಿಂದ ಸಂಗ್ರಹಿಸಿದರು ಎಂದರು.
1880 ರಲ್ಲಿ ಧಾರವಾಡದಲ್ಲಿ ಜನಿಸಿದ ಹಳಕಟ್ಟಿಯವರ ಮೂಲ ಊರು ಬೆಳಗಾವಿ ಜಿಲ್ಲೆಯ ಪರಸಗಡ ಹತ್ತಿರದ ಹಳಕಟ್ಟಿ. ಇವರ ತಂದೆ ಗುರುಬಸಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದು ಉತ್ತಮ ಲೇಖಕರಾಗಿದ್ದರು. ಇವರ ಸಂಸ್ಕಾರ ಹಳಕಟ್ಟಿಯವರಿಗೆ ಬಾಲ್ಯದಲ್ಲೇ ದೊರೆತಿತ್ತು. ಮೂರನೇ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡ ಇವರನ್ನು ಅಜ್ಜಿ ಬಸ್ಸಮ್ಮ ಸಾಕಿ ಬೆಳೆಸಿದರು ಎಂದರು.
ಧಾರವಾಡದಲ್ಲಿ ಪ್ಲೇಗ್ ರೋಗ ಹರಡಿದಾಗ ಹೆಂಡತಿಯ ಊರಾದ ಬನಹಟ್ಟಿಗೆ ತೆರಳಿದ್ದ ಸಂದರ್ಭದಲ್ಲಿ ಮಾವನವರು ನೀಡಿದ ‘ಷಟಸ್ಥಲ’ ಮತ್ತು ‘ಪ್ರಭುದೇವರ ವಚನಗಳು’ ಎಂಬ ತಾಡೋಲೆ ಪುಸ್ತಕಗಳು ಹಳಕಟ್ಟಿಯವರ ಜೀವನದ ದಿಕ್ಕನ್ನೇ ಬದಲಿಸಿದವು. ವಚನಗಳ ಮಹತ್ವವನ್ನು ಅರಿತ ಅವರು, ತಮ್ಮ ಇಡೀ ಜೀವನವನ್ನು ವಚನ ಸಾಹಿತ್ಯಕ್ಕಾಗಿ ಮುಡಿಪಾಗಿಡಲು ಸಂಕಲ್ಪಿಸಿದವರು ಎಂದು ತಿಳಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 