ಧಾರವಾಡ ಹೈಕೋರ್ಟ್ ಗೆ ಹುಸಿ ಬಾಂಬ್ ಕರೆ
Fake bomb call to Dharwad High Court
ಧಾರವಾಡ: ಇಲ್ಲಿಯ ಹೈಕೋರ್ಟ್ ಪೀಠದ ಆವರಣದಲ್ಲಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಸಿದ್ದು, ಪೊಲೀಸ್ ಇಲಾಖೆ ಶೋಧನಾ ಕಾರ್ಯ ಕೈಗೊಂಡಿದೆ.ಮಧ್ಯಾಹ್ನ 1:55 ಕ್ಕೆ ಬಾಂಬ್ ಬ್ಲಾಸ್ಟ್ ಆಗಲಿದೆ ಎಂಬ ಬೆದರಿಕೆ ಹಿನ್ನಲೆಯಲ್ಲಿ ಹೈ ಅಲರ್ಟ್ ಮಾಡಿದಲ್ಲದೆ ಶ್ವಾನಗಳೊಂದಿಗೆ ಶೋಧನಾ ಕಾರ್ಯ ನಡೆಸಲಾಗಿದೆ. ಬಾಂಬ್ ನಿಷ್ಕಿಯ ದಳ ಸಿಬ್ಬಂದಿ ಕೂಡ ಆಗಮಿಸಿದ್ದು, ಬಾಂಬ್ ಶೋಧಿಸುವ ಕಾರ್ಯ ಕೈಗೊಂಡಿತು.
ಈ ವೇಳೆ ಪೀಠದ ಸಿಬ್ಬಂದಿಗಳನ್ನು ಹೊರಗಡೆ ಕಳುಹಿಸಿದ್ದು, ನ್ಯಾಯಾಲಯ ಕಲಾಪಗಳಿಗೆ ರಜೆ ಘೋಷಿಸಲಾಗಿದೆ. ಸದ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ತೊಡಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.
ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಸ್ಪೋಟಿಸುವ ಬೆದರಿಕೆ ಇ ಮೇಲ್ ಬಂದಿದೆ. ಮಹಮ್ಮದ್ ರಾಜಗುರು ಎಂಬಾತನಿಂದ ಜಿಲ್ಲಾ ನ್ಯಾಯಾಧೀಶರಿಗೆ ಇ-ಮೇಲ್ ಮಾಡಲಾಗಿದೆ. ಭಯಗೊಂಡು ಜನರು ನ್ಯಾಯಾಲಯದಿಂದ ಹೊರಗೆ ಬಂದಿದ್ದಾರೆ. ಪೊಲೀಸ್ ತಂಡ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಗದಗ ಎಸ್ಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 