ಕೃಷಿ ಅಭಿವೃದ್ಧಿ ಕೇಂದ್ರದಲ್ಲಿ ಕೃಷಿಕರ ದಿನಾಚರಣೆ: ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳಿಗೆ ಚಾಲನೆ
ಧಾರವಾಡ 02: ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಯ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕೃಷಿಕರ ದಿನಾಚರಣೆಯನ್ನು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಸ್ಪರ್ಧೆಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಉದ್ಘಾಟಿಸಿ ಮಾತನಾಡಿದರು. ರೈತರ ಕಲ್ಯಾಣ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶೈಲಂ ಹುಸೇನ್, ಪೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯ ಸೇರಿದಂತೆ ವಿವಿಧ ತಾಲೂಕುಗಳ ತಹಶೀಲ್ದಾರರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು. ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗಿದ್ದು, ಭಾಗವಹಿಸಿದವರಿಗೆ ಉತ್ಸಾಹಭರಿತ ವಾತಾವರಣ ನಿರ್ಮಾಣವಾಯಿತು.