ರೈತ ಸಂಘದಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ
Farmers' Association lays siege to Suvarna Vidhana Soudha
ಯರಗಟ್ಟಿ: ರೈತರ ಹತ್ತು ಹಲವು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಾವಿರಾರು ಸಂಖ್ಯೆಯಲ್ಲಿ ರೈತರು ಸೇರಬೇಕು ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಕುಮಾರ ವರದಿ ಕರೆ ನೀಡಿದರು.ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಂಗಳವಾರ ಕರಪತ್ರ ವಿತರಿಸಿ ಮಾತನಾಡಿದ ಅವರು, 11ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು ಮತ್ತು ಕಬ್ಬಿನ ಉತ್ಪನಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬರುವ ತೆರಿಗೆಯಲ್ಲಿ ತಲಾ ಒಂದು ಸಾವಿರ ರೂಪಾಯಿಗಳನ್ನು ಬೆಂಬಲ ಬೆಲೆ ಕೊಡಬೇಕು. ರೈತರ ಪಂಪ್ ಸೆಟ್ ಗಳಿಗೆ ಹೋಗಲು 12 ಗಂಟೆ ತ್ರಿಪೇಸ್ ವಿದ್ಯುತ್ ನೀಡಬೇಕು ಹಾಗೂ ರೈತರ ಸಮಸ್ಯೆಗಳಿಗೆ ಕೂಡಲೆ ಪರಿಹಾರ ನೀಡುಬೇಕು ಎಂದು ಆಗ್ರಹಿಸಿದರು.ರೈತ ಸಂಘದ ಪಾಂಡು ಬಿರನಗಡ್ಡಿ, ವಾಸು ಪಂಡೊಳ್ಳಿ ಬಸವರಾಜ ಬಿಜ್ಜೂರ, ಸತ್ಯಪ್ಪ ಮಲ್ಲಾಪೂರ, ಯಲ್ಲನಾಯ್ಕ ನಾಯ್ಕ, ಮಂಜು ಪೂಜೇರ, ಸತ್ಯಪ್ಪ ಮಲ್ಲಾಪೂರ, ರಾಮಕೃಷ್ಣ ಎಳ್ಳಮ್ಮಿ, ರಂಗಪ್ಪ ಗಂಗರಡ್ಡಿ, ಯಕ್ಕೇರ್ಪ ತಳವಾರ, ಗಿರೇಪ್ಪ ಗಂಗರೆಡ್ಡಿ, ಯಕ್ಕೇರೆಪ್ಪ ತಳವಾರ, ಸಿಂಧೂರ ತೆಗ್ಗಿ, ಅಶೋಕ ನಂದಿ ಮುಂತಾದವರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 