ಕಬ್ಬಿನ ಎಫ್‌ಆರ್‌ಪಿ ದರದಂತೆ ಪೂರ್ಣ ಪಾವತಿಗೆ ರೈತ ಸಂಘದ ಆಗ್ರಹ
Farmers' association demands full payment as per sugarcane FRP rate
ಬೆಳಗಾವಿ 16 : ಕಬ್ಬು ಬೆಳೆಗಾರರಿಗೆ ಸಿಗಬೇಕಾದ ಎಫ್‌ಆರ್‌ಪಿ ಹಣದ ಕುರಿತು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು. ಕಬ್ಬಿನ ಎಫ್‌ಆರ್‌ಪಿ ದರ, ಕಟಾವು ಹಾಗೂ ಸಾಗಾಣಿಕೆ ವೆಚ್ಚ ಕಡಿತದ ಬಳಿಕ ರೈತರಿಗೆ ಪಾವತಿಸಬೇಕಾದ ಮೊತ್ತದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎಫ್‌ಆರ್‌ಪಿ ದರದಂತೆ ರೈತರಿಗೆ ಪೂರ್ಣ ಪ್ರಮಾಣದ ಹಣ ಪಾವತಿಸಬೇಕು ಎಂದು ಸಂಘಟನೆ ಆಗ್ರಹಿಸಿತು. ಕಳೆದ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳಲ್ಲಿ ರೈತರಿಗೆ ಪಾವತಿಯಾಗಬೇಕಾದ ಮೊತ್ತದ ಕುರಿತು ಸಭೆಯಲ್ಲಿ ಪ್ರಶ್ನೆ ಎತ್ತಲಾಯಿತು. ಈ ವರ್ಷವೂ ಈಖಕ ಪಾವತಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘಟನೆ ಒತ್ತಾಯಿಸಿದೆ. ರೈತರ ಹಿತದೃಷ್ಟಿಯಿಂದ ನಿಗದಿತ ಎಫ್‌ಆರ್‌ಪಿ ದರದಂತೆ ಹಣ ಪಾವತಿಸುವಂತೆ ಸಂಬಂಧಪಟ್ಟ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಬೇಕು ಎಂಬುದು ಸಭೆಯ ಪ್ರಮುಖ ಆಗ್ರಹವಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 