ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ: ತಕ್ಷಣ ಪರಿಹಾರ ಘೋಷಿಸಲು ರೈತ ಸಂಘದ ಆಗ್ರಹ
Farmers in distress due to rainfall deficit: Farmers' association demands immediate announcement of
ವಿಜಯಪುರ 03 : ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ "ಮಳೆ ಬರುವವರೆಗೆ ರೈತರು ಬಿತ್ತನೆ ಮಾಡಬಾರದು" ಎಂದು ನೀಡಿರುವ ಹೇಳಿಕೆ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂದು ಟೀಕಿಸಿದರು.
ಕೇವಲ ಹೇಳಿಕೆಗಳನ್ನು ನೀಡಿ ಕೈ ತೊಳೆದುಕೊಳ್ಳುವ ಬದಲು ರೈತರ ಸಂಕಷ್ಟಕ್ಕೆ ಸ್ಪಂದಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರವಿಂದ್ ಕುಲಕರ್ಣಿ ಒತ್ತಾಯಿಸಿದರು. ಈ ವರ್ಷ ಮುಂಗಾರು ಸಂಪೂರ್ಣ ವಿಫಲವಾಗಿದ್ದು, ಜೂನ್ ತಿಂಗಳು ಮುಕ್ತಾಯಗೊಂಡು ಜುಲೈ ಮೊದಲ ವಾರ ಆರಂಭವಾಗಿದ್ದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಸಮರ್ಕ ಮಳೆಯಾಗಿಲ್ಲ. ಪರಿಣಾಮ ರೈತರು ಬಿತ್ತನೆ ಕಾರ್ಯ ಆರಂಭಿಸಲು ಸಾಧ್ಯವಾಗದೇ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.
ಈಗಾಗಲೇ ಬಿತ್ತನೆಗೆ ಮಾಡಿಕೊಂಡಿರುವ ಸಿದ್ಧತೆಗಳು ಹಾಗೂ ಕೃಷಿ ವೆಚ್ಚಗಳು ವ್ಯರ್ಥವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.ರಾಜ್ಯ ಸರ್ಕಾರ ಕೂಡಲೇ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಬರಗಾಲ ಘೋಷಣೆ ಮಾಡಬೇಕು. ರೈತರಿಗೆ ಬೆಳೆ ನಷ್ಟ ಪರಿಹಾರ, ಬಿತ್ತನೆ ಬೀಜ, ರಸಗೊಬ್ಬರ ಸಹಾಯಧನ, ಬೆಳೆ ಸಾಲ ಮರುಪಾವತಿಗೆ ವಿನಾಯಿತಿ ಸೇರಿದಂತೆ ಅಗತ್ಯ ಪರಿಹಾರ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಅರವಿಂದ ಕುಲಕರ್ಣಿ ಸರ್ಕಾರವನ್ನು ಒತ್ತಾಯಿಸಿದರು. ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ತ್ವರಿತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೃಷಿ ವಲಯವನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಅವರು ಮನವಿ ಮಾಡಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 