ಕೊಪ್ಪಳ 20: ಫೆಬ್ರುವರಿ. 01 ರಂದು ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಕೊಪ್ಪಳದಲ್ಲಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕರಾದ ಕೃಷ್ಣಮೂತರ್ಿ ದೇಸಾಯಿ ಅವರು ಹೇಳಿದರು.
ಮಡಿವಾಳ ಮಾಚಿದೇವ ಅವರ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ಫೆ. 01 ರಂದು ಬೆಳಿಗ್ಗೆ 11 ಗಂಟೆಗೆ ವೇದಿಕೆ ಸಮಾರಂಭ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಅಲ್ಲದೇ ಅಂದು 09 ಗಂಟೆಗೆ ಗಡಿಯಾರ ಕಂಬದ ಹತ್ತಿರವಿರುವ ಅಕ್ಕಮಹಾದೇವಿ ದೇವಸ್ಥಾನದಿಂದ ಸಾಹಿತ್ಯ ಭವನದವರೆಗೆ ಮಡಿವಾಳ ಮಾಚಿದೇವ ಅವರ ಭಾವಚಿತ್ರದ ಮೇರವಣಿಗೆ ನಡೆಯದ್ದು, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಸಮಾರಂಭದಲ್ಲಿ ಮಡಿವಾಳ ಮಾಚಿದೇವ ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಪ್ರತಿಬಾವಂತ ವಿದ್ಯಾಥರ್ಿಗಳಿಗೆ ಸನ್ಮಾನಿಸಲಾಗುವುದು. ಕಾರ್ಯಕ್ರಮ ದಿನದಂದು, ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯವರು ಕೈಗೊಳ್ಳಬೇಕು. ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಎಲ್ಲಾ ಸಮಾಜ ಬಾಂಧವರು, ಸಾರ್ವಜನಿಕರು ಮೆರವಣಿಗೆ ಹಾಗೂ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕರಾದ ಕೃಷ್ಣಮೂತರ್ಿ ದೇಸಾಯಿ ಅವರು ಮನವಿ ಮಾಡಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ರಾಟಿಮನಿ, ಶಿಕ್ಷಣ ಇಲಾಖೆಯ ಬಸವರಾಜ, ನಗರ ಪೊಲೀಸ್ ಠಾಣೆಯ ಪಿ.ಐ. ಶಿವಾನಂದ ವಾಲಿಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಾಜದ ಮುಖಂಡರುಗಳಾದ ಚಂದ್ರಶೇಖರ, ರಮೇಶ, ಸಣ್ಣ ಈರಣ್ಣ, ಹೆಚ್. ಗೋಪಾಲ, ನಿಂಗಪ್ಪ, ದೇವಪ್ಪ ಕಕರ್ಿಹಳ್ಳಿ, ಶಿವಮೂತರ್ಿ ಸೇರಿದಂತೆ ಮತ್ತಿತರರು ಭಾಗವಹಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.