ಫೆ. 10 ಮತ್ತು 11 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ
Feb. 10th and 11th Betageri Sriyalammadevi Jatramahotsava
ಫೆ. 10 ಮತ್ತು 11 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ
ಬೆಟಗೇರಿ, 07: ಗ್ರಾಮದ ಶ್ರೀರೇಣುಕಾದೇವಿ ದೇವಾಲಯದಲ್ಲಿ ಫೆ.10 ಮತ್ತು ಫೆ.11ರಂದು ಶ್ರೀ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಫೆ.10ರಂದು ಮುಂಜಾನೆ ಮತ್ತು ಸಂಜೆ 7 ಗಂಟೆಗೆ ಸ್ಥಳೀಯ ಶ್ರೀ ರೇಣುಕಾದೇವಿ ದೇವಾಲಯದ ಶ್ರೀ ಯಲ್ಲಮ್ಮದೇವಿಯ ಗದ್ಗುಗೆ ಪೂಜೆ, ನೈವೇಧ್ಯ ಸಮರೆ್ನ, ಸಾಯಂಕಾಲ 5 ಗಂಟೆಗೆ ಪುರದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವ ಕಾರ್ಯಕ್ರಮಗಳು ನಡೆಯಲಿದೆ. ಫೆ.11ರಂದು ಇಲ್ಲಿಯ ಶ್ರೀ ರೇಣುಕಾದೇವಿ ದೇವಾಲಯದಲ್ಲಿ ಶ್ರೀದೇವಿಯ ಗದ್ಗುಗೆ ಮಹಾಪೂಜೆ, ಮಹಾಭಿಷೇಕ, ಉಡಿ ಮತ್ತು ಹಡಲಗಿ ತುಂಬುವದು, ನೈವೇಧ್ಯ ಸಮರೆ್ನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು, ಹಾಲಿ ಮತ್ತು ಮಾಜಿ ಗ್ರಾಪಂ, ತಾಪಂ, ಜಿಪಂ ಸದಸ್ಯರು, ಗಣ್ಯರು, ರಾಜಕೀಯ ಮುಖಂಡರು ಮುಖ್ಯಅತಿಥಿಗಳಾಗಿ, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಶ್ರೀ ರೇಣುಕಾದೇವಿ ಜಾತ್ರಾ ಮಹೋತ್ಸವ ಸಮಿತಿ ಸದಸ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸ್ಥಳೀಯ ಶ್ರೀ ರೇಣುಕಾದೇವಿ ಜಾತ್ರಾ ಮಹೋತ್ಸವ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ. ಬೆಟಗೇರಿ: ಸವದತ್ತಿ ಶ್ರೀ ಯಲ್ಲಮ್ಮದೇವಿ ಭಾವಚಿತ್ರ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 