ನೊಂದ ರೈತನಿಗೆ ರೈತ ಸಂಘದಿಂದ ಧನ ಸಹಾಯ
Financial assistance from farmers' association to distressed farmer
ಗದಗ 23 : ಇತ್ತೀಚಿಗೆ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಇಬ್ಬರು ಬಡ ರೈತರ 10 ಎಕರೆ ಜಮೀನಿನಲ್ಲಿ ಬೆಳೆದಂತಹ ಗೋವಿನ ಜೋಳಕ್ಕೆ ರಾತ್ರಿ ಸಮಯದಲ್ಲಿ ಟ್ರಾ-್ಯಕ್ಟರ್ ಮುಖಾಂತರ ದುಷ್ಕರ್ಮಿಗಳು ಬೆಳೆಯನ್ನು ಹಾಳು ಮಾಡಿರುವ ಕೃತ್ಯವನ್ನು ಖಂಡಿಸಿ ಹಾಗೂ ನೊಂದ ರೈತರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವ ಮೇಟಿ ಅವರ ಬಣದ ಮುಂಡರಗಿ ತಾಲೂಕಿನ ಮಹಿಳಾ ಅಧ್ಯಕ್ಷರಾದ ನಾಗವೇಣಿ ಕುಡುಪಲಿ ಹಾಗೂ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಿರೇಮಠ ಅವರು ಹಾರೂಗೇರಿ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯವನ್ನು ತುಂಬಿ ಸಂತಾಪವನ್ನು ವ್ಯಕ್ತಪಡಿಸಿ, ಮುಂಡರಗಿ ತಾಲೂಕು ಹಸಿರು ಸೇನೆ ವತಿಯಿಂದ ಧನಸಹಾಯವನ್ನು ಮಾಡಿದರು. ಈ ಸಂದರ್ಭದಲ್ಲಿ ಮುಂಡರಗಿ ತಾಲ್ಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 