ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ : ಮುಖಂಡ ಮಾನಸಿಂಗ್
Financial burden from guarantee schemes: Leader Mansingh
ತಾಳಿಕೋಟಿ 07 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ 2026-27 ನೇ ಸಾಲಿನ ಬಜೆಟ್ ಸಾಲದ ಹೊರೆ ಹೊತ್ತ ಶೂನ್ಯ ಸಾಧನೆಯ ಬಜೆಟ್ ಆಗಿದೆ ಎಂದು ಬಿಜೆಪಿ ಯುವ ಮುಖಂಡ ಮಾನಸಿಂಗ್ ಕೊಕಟನೂರ ಟೀಕಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆಯನ್ನು ಎದುರಿಸುತ್ತಿರುವ ಈ ಸರ್ಕಾರವು ದೊಡ್ಡ ಪ್ರಮಾಣದಲ್ಲಿ ಸಾಲದ ಹೊರೆಯನ್ನು ಹೊತ್ತಿದೆ. ಬಜೆಟ್ ಕೇವಲ ಭರವಸೆಗಳಿಗೆ ಮಾತ್ರ ಸೀಮಿತವಾಗಿದ್ದು ಅನುಷ್ಠಾನಕ್ಕೆ ಬರುವುದು ಕಷ್ಟ ಸಾಧ್ಯ. ವಿಜಯಪುರ ಜಿಲ್ಲೆ ಹಾಗೂ ಅದರಲ್ಲೂ ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಹೇಳಿಕೊಳ್ಳುವಂತಹ ಯಾವ ಯೋಜನೆಗಳು ಘೋಷಣೆಯಾಗಿಲ್ಲ ಒಟ್ಟಾರೆ ಇದೊಂದು ನಿರುತ್ಸಾಹದ ಬಜೆಟ್ ಎಂದು ಅವರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 