ಹಾಲು ಸಾಗಾಟ ವಾಹನಕ್ಕೆ ಬೆಂಕಿ: ಆಗ್ನಿ ಶಾಮಕದಳದಿಂದ ಬೆಂಕಿ ಶಮನ
Fire in milk transport vehicle: Firefighters douse the fire
ಕಾರವಾರ 08: ರಾಷ್ಟ್ರೀಯ ಹೆದ್ದಾರಿ 66 ರ ಲಂಡನ್ ಬ್ರಿಡ್ಜ್ ಬಳಿ ನಿಲ್ಲಿಸಿದ್ದ ಹಾಲಿನ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ನಡೆದಿದೆ. ಕಾರವಾರದ ಕೋಡಿಬಾಗ ಥಾಮ್ಸೆ ವಾಡದ ನಿವಾಸಿ ಸಂತೋಷಿ ಸತೀಶ್ ಚಿಪಕರ್ ಎಂಬುವವರಿಗೆ ಸೇರಿದ ಹಾಲು ಸಾಗಾಟ ವಾಹನ ಶುಕ್ರವಾರ ರಾತ್ರಿ ಪ್ಲೈ ಓವರ್ ಕೆಳಗೆ ನಿಲ್ಲಿಸಲಾಗಿತ್ತು. ಶನಿವಾರ ಬೆಳಗ್ಗೆ ಆಕಸ್ಮಿಕವಾಗಿ ವಾಹನದ ಎಂಜಿನ್ ನಲ್ಲಿ ಬೆಂಕಿ ತಗಲಿ ವಾಹನ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ವಾಹನದಲ್ಲಿ ಶಾರ್ಟ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರುವ ಸಾಧ್ಯತೆ ಇದೆ. ಒಂದು ಲಕ್ಷ ರೂ.ಗಳಿಗೂ ಹೆಚ್ಚು ಹಾನಿಯಾಗಿದ್ದು ಘಟನೆ ಸಂಬಂಧ ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 