ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ
Kumaraswamy
ಬೆಂಗಳೂರು, ಡಿ 4-ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯವುಂಟಾಗಿದೆ.
ಹವಾಮಾನ ವೈಪರೀತ್ಯದಿಂದ ಹಾಗೂ ಚುನಾವಣಾ ಪ್ರಚಾರಗಳಲ್ಲಿ ಸತತ ತೊಡಗಿಸಿಕೊಂಡಿದ್ದರಿಂದ ಜ್ವರ, ನೆಗಡಿ ಕೆಮ್ಮು ಉಂಟಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಚಿಕ್ಕಬಳ್ಳಾಪುರ ಪ್ರಚಾರದಲ್ಲಿ ಭಾಗಿಯಾಗಿದ್ದಾಗಲೇ ಗಂಟಲು ಕೆರೆತ ಹಾಗೂ ಶೀತವುಂಟಾಗಿತ್ತು. ವಿಶ್ರಾಂತಿರಹಿತ ಸುತ್ತಾಟ, ಭಾಷಣದಿಂದ ಜ್ವರ ಹೆಚ್ಚಾಗಿದ್ದು, ಜಯದೇವ ಆಸ್ಪತ್ರೆಯಲ್ಲಿ ವೈದ್ಯರಿಂದ ಬುಧವಾರ ತಪಾಸಣೆಗೊಳಗಾದರು. ಸುಮಾರು ಅರ್ಧಗಂಟೆ ಕುಮಾರಸ್ವಾಮಿ ಅವರನ್ನು ಪರಿಶೀಲಿಸಿದ ವೈದ್ಯರು ನಾಲ್ಕು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ಅವರು ತಮ್ಮ ಜೆ.ಪಿ ನಗರದ ನಿವಾಸಕ್ಕೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 