ಗಣೇಶ ಚತುರ್ಥಿಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡಲು ಮಾಜಿ ಶಾಸಕಿ ಮನವಿ
Former MLA requests permission to use DJs during Ganesh Chaturthi
ಗಣೇಶ ಚತುರ್ಥಿಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡಲು ಮಾಜಿ ಶಾಸಕಿ ಮನವಿ
ಕಾರವಾರ : ಗಣೇಶ ಚತುರ್ಥಿ ಸಂದರ್ಭದಲ್ಲಿ ಡಿಜೆ ಹೆವಿ ಸ್ಪೀಕರ್ ಬಳಕೆಗೆ ಅವಕಾಶ ಮಾಡಿಕೊಡುವಂತೆ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡಿದ ರೂಪಾಲಿ ಎಸ್.ನಾಯ್ಕ, ರಾಜ್ಯ ಸರ್ಕಾರ ಹಿಂದುಗಳ ಪವಿತ್ರ ಹಬ್ಬವಾದ ಗಣೇಶ ಚತುರ್ಥಿ ಸಂದರ್ಭದಲ್ಲಿ ಡಿಜೆ ಬಳಕೆಗೆ ನಿಬಂರ್ಧ ವಿಧಿಸಿರುವುದು ಸರಿಯಲ್ಲ ಎಂದರು.ಗಣೇಶೋತ್ಸವ ಎಂದರೆ ಅದೊಂದು ಊರಿಗೆ ಊರೇ ಸಂಭ್ರಮಿಸುವ ಹಬ್ಬ. ಹಿಂದುಗಳು ವರ್ಷದಲ್ಲಿ 11 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಏರಿ್ಡಸುತ್ತಾರೆ. ಈ ಅವಧಿಯಲ್ಲಿ ಡಿಜೆ ಬಳಕೆಗೆ ಸಮಯದ ಮಿತಿ ಹಾಕುವುದು ಸರಿಯಲ್ಲ. ನಮ್ಮ ಜಿಲ್ಲೆಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಅವರನ್ನು ವಿನಂತಿಸಿದರು. ಹಾಗೆಯೇ ರಾಜ್ಯ ಸರ್ಕಾರ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ವಿನಂತಿಸಿದರು. ಹಿಂದು ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು......
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 