ಉಚಿತ ನೇತ್ರ ತಪಾಸಣೆ ಶಿಬಿರ
ಬ್ಯಾಡಗಿ 12 ಪಟ್ಟಣದ ಕದರಮಂಡಲಗಿ ರಸ್ತೆಯ ಸ್ನೇಹ ಸದನದಲ್ಲಿ ಇಂದು ರೋಟರಿ ಕ್ಲಬ್ ಬ್ಯಾಡಗಿ ಮತ್ತು ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಮತ್ತು ಸ್ನೇಹ ಸದನ ಇವರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.ಪಟ್ಟಣದ ಹಲವಾರು ಜನ ಬೆಳಗ್ಗೆಯಿಂದಲೂ ಸ್ನೇಹ ಸದನದಲ್ಲಿ ಸಾಲುಗಟ್ಟಿ ನಿಂತು ಕಣ್ಣಿನ ಪರೀಕ್ಷೆ ಮಾಡಿಸಿಕೊಂಡರು.ಶಿವಮೊಗ್ಗದ ಶಂಕರ್ ಕಣ್ಣಿನ ಆಸ್ಪತ್ರೆಯ ವೈದ್ಯರ ತಂಡ ಜನರ ಆರೋಗ್ಯ ತಪಾಸಣೆ ನಡೆಸಿ ಓಷಧೋಪಚಾರ ನೀಡಿದರು. 73 ಜನರಿಗೆ ಉಚಿತ ಕಣ್ಣಿನ ಪೊರೆ ತಪಾಸಣೆ ನಡೆಸಿ, 10 ಜನರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವುಳ್ಳವರಿಗೆ ಆಸ್ಪತ್ರೆಗೆ ಶಿಫಾರಸ್ಸು ಮಾಡಿದರು.ಮಾಜಿ ಅಧ್ಯಕ್ಷ ಹಾಗೂ ಮಾಜಿ ಅಸಿಸ್ಟೆಂಟ್ ಗವರ್ನರ್ ಮಂಜುನಾಥ್ ಉಪ್ಪಾರ್ ಮಾತನಾಡಿ, ಇಂದಿನ ಒತ್ತಡದ ಜೀವನ, ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರೀತ್ಯ ಕಾಣುತ್ತಿದ್ದೇವೆ.
ಪ್ರತಿಯೊಬ್ಬರು ಎರಡ್ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು, ಎಂದರು.ವೈದ್ಯಾಧಿಕಾರಿ ಡಾ.ಪೂಜಾ ಮಾತನಾಡಿ, ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಅನುಕೂಲವಾಗಿವೆ,ಎಂದರು.ಈ ಸಂದರ್ಭದಲ್ಲಿ ನಿರ್ದೇಶಕ ಸಿಸ್ಟರ್ ರೂಪ ಸರಸ್ವತಿ ಮತ್ತು ಸಿಬ್ಬಂದಿ ವರ್ಗ ಹಾಗೂ ರೋಟರಿ ಕ್ಲಬ್ ನ ಮಾಜಿ ಅಸಿಸ್ಟೆಂಟ್ ಗವರ್ನರ್ ಮಂಜುನಾಥ್ ಅಧ್ಯಕ್ಷರಾದ ಅನಿಲ್ ಕುಮಾರ್ ಬೊಡ್ಡ ಪಾಠಿ . ಉಪಾಧ್ಯಕ್ಷ ಆನಂದ ಗೌಡ ಜಂಟಿ ಕಾರ್ಯದರ್ಶಿ ಕಿರಣ್ ಮಾಳೆನಳ್ಳಿ ಮತ್ತು ಶಿವಮೊಗ್ಗ ಶಂಕರ ಆಸ್ಪತ್ರೆಯ ನೇತ್ರ ಪರಿಕ್ಷಕ ಸುನಿಲ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಅರುಣ್. ಸುರೇಶ್ ಇನ್ನೂ ಅನೇಕರು ಉಪಸ್ಥಿತರಿದ್ದರು.