ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭ
Free legal services clinic launched for defense personnel, ex-soldiers and their family members
ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭ
ಧಾರವಾಡ ಸೆ.16: ನಮ್ಮ ದೇಶದ ವೀರ ಸೈನಿಕರು ತ್ಯಾಗಜೀವಿಗಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಜನರನ್ನು ಕಾಪಾಡುತ್ತಿದ್ದಾರೆ. ಅವರ ಕುಟುಂಬದ ಸದಸ್ಯರು ಕಾನೂನಿನ ತೊಡಕಿನಲ್ಲಿ ಸಿಲುಕಿ ತೊಂದರೆ ಅನುಭವಿಸಬಾರದು. ಅವರಿಗೆ ಕಾನೂನಿನ ಅರಿವು ಮೂಡಿಸುವುದು ಮತ್ತು ಕಾನೂನಿನ ನೆರವು ನೀಡುವುದಕ್ಕಾಗಿಯೇ ಉಚಿತ ಕಾನೂನು ಸೇವೆಗಳ ಕ್ಲಿನಿಕ್‌ಗಳನ್ನು ಪ್ರಾರಂಭಿಸಲಾಗಿದೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ವಕೀಲರ ಸಂಘ ಹಾಗೂ ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಸಹಯೋಗದಲ್ಲಿ ನಿನ್ನೆ (ಸೆ. 15) ಧಾರವಾಡದ ಡಿ.ಸಿ.ಕಂಪೌಂಡಿನಲ್ಲಿರುವ ಸೈನಿಕ ಕಲ್ಯಾಣ ಮತ್ತು ಮುನರ್ವಸತಿ ಇಲಾಖೆಯ ಆವರಣದಲ್ಲಿ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ವೀರ ಪರಿವಾರ ಸಹಾಯ ಯೋಜನೆ-2025 ಅಡಿಯಲ್ಲಿ ಉಚಿತ ಕಾನೂನು ಸೇವೆಗಳ ಕ್ಲಿನಿಕ್‌ಗಳ ವರ್ಚುವಲ್ ಉದ್ಘಾಟನೆ ಸಮಾರಂಭವನ್ನು ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಭಾರತಿ.ಬಿ.ಎಸ್. ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ. ಎಫ್ .ದೊಡ್ಡಮನಿ, ಮಾಜಿ ಸೈನಿಕರು, ಅವರ ಕುಟುಂಬದವರು ಹಾಗೂ ಇಲಾಖೆಯ ಸಿಬ್ಬಂದಿಯವರು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 