ಸೆ.28ರಂದು ಮುದ್ದೇಬಿಹಾಳದಲ್ಲಿ ಉಚಿತ ರೇಬಿಸ್ ಲಸಿಕಾ ಅಭಿಯಾನ
ಮುದ್ದೇಬಿಹಾಳ, ಸೆ.25: ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಸೆ.28ರಂದು ಮುದ್ದೇಬಿಹಾಳ ಪಶು ಆಸ್ಪತ್ರೆಯ ಆವರಣ ಸೇರಿದಂತೆ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಶ್ವಾನಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಎಲ್ಲ ಶ್ವಾನ ಪ್ರಿಯರು ತಮ್ಮ ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ಹಾಕಿಸುವ ಮೂಲಕ ರೇಬಿಸ್ ರೋಗ ತಡೆಗಟ್ಟಲು ಸಹಕರಿಸಬೇಕು ಎಂದು ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ಶಿವಾನಂದ ಮೇಟಿ ಮನವಿ ಮಾಡಿದ್ದಾರೆ.
ಪ್ರತಿ ವರ್ಷ ಸೆ.28ರಂದು ವಿಶ್ವ ರೇಬಿಸ್ ದಿನ ಆಚರಿಸಲಾಗುತ್ತದೆ. ರೇಬಿಸ್ ಕುರಿತು ಜಾಗೃತಿ ಮೂಡಿಸುವುದು, ನಾಯಿ ಕಚ್ಚುವಿಕೆಯನ್ನು ತಡೆಗಟ್ಟುವುದು, ಸಾಕು ಹಾಗೂ ಬೀದಿ ನಾಯಿಗಳಿಗೆ ಲಸಿಕೆ ಹಾಕಿಸುವುದು ಮತ್ತು ರೇಬಿಸ್ನಿಂದ ಉಂಟಾಗುವ ಮಾನವ ಸಾವುಗಳನ್ನು ನಿರ್ಮೂಲನೆ ಮಾಡುವುದು ಇದರ ಉದ್ದೇಶವಾಗಿದೆ.