ಕಾರ್ಮಿಕರಿಗೆ ಉಚಿತ ಚರ್ಮರೋಗ ತಪಾಸಣಾ ಶಿಬಿರ
Free skin checkup camp for workers
ಕಾರ್ಮಿಕರಿಗೆ ಉಚಿತ ಚರ್ಮರೋಗ ತಪಾಸಣಾ ಶಿಬಿರ
ಕೊಪ್ಪಳ 03: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಛೇರಿ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಅಬಯ ಸಾಲ್ವೆಂಟ್ ರೈಸ್ ಮಿಲ್ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಉಚಿತ ಚರ್ಮರೋಗ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ಶುಕ್ರವಾರದಂದು ನಡೆಯಿತು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಹೆಚ್ ಅವರು ಮಾತನಾಡಿ ಯಾರಿಗಾದರೂ ಮೈ ಮೇಲೆ ತಿಳಿ-ಬಿಳಿ ತಾಮ್ರವರ್ಣದ ಸ್ಪರ್ಶ್‌ಜ್ಞಾನವಿಲ್ಲದ 5 ಅಥವಾ 5ಕ್ಕಿಂತ ಹೆಚ್ಚು ಮಚ್ಚೆಗಳು ಇದ್ದರೆ, ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ತ್ವಚೆಯ ಮೇಲೆ ಕೆಂಪಾದ ಬಾವು, ಕಣ್ಣು ಮುಚ್ಚುವಲ್ಲಿ ತೊಂದರೆ ಕಾಣಿಸಿಕೊಂಡರೆ, ಇವು ಕುಷ್ಠರೋಗದ ಲಕ್ಷಣಗಳಾಗಿರಬಹುದು. ಇಂತಹ ಲಕ್ಷಣಗಳು ಯಾರಿಗಾದರು ಕಾಣಿಸಿಕೊಂಡರೆ, ತಕ್ಷಣ ನಿಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಥವಾ ಆರೋಗ್ಯ ಸಿಬ್ಬಂದಿಗಳಲ್ಲಿ ಪರೀಕ್ಷಿಸಿಕೊಂಡು, ಖಚಿತ ಪಟ್ಟರೆ ಉಚಿತವಾಗಿ ಚಿಕಿತ್ಸೆ ಪಡೆಯಿರಿ. ಇದಕ್ಕೆ ಯಾರು ಹಿಂಜರಿಯಬಾರದು, ಇದು ಮೈಕ್ರೊಬ್ಯಾಕ್ಟಿರಿಯಾ ಲೆಪ್ರೈ ಎಂಬ ಸೂಕ್ಷ್ಮಾಣುವಿನಿಂದ ಗಾಳಿ ಮೂಲಕ ಹರಡುತ್ತದೆ. ಇದೊಂದು ಸಾಂಕ್ರಾಮಿಕ ರೋಗವಾಗಿದೆ. ರೋಗಿಯು ಕೆಮ್ಮುವುದರ ಮೂಲಕ ಮತ್ತು ಸೀನುವುದರ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಪ್ರಸಾರವಾಗುತ್ತದೆ. ಇದು ಖಂಡಿತ ವಾಸಿಯಾಗುವಂತಹ ಖಾಯಿಲೆಯಾಗಿದ್ದು, ನಿರ್ಲಕ್ಷ್ಯತೆ ಮಾಡದೆ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರೀಕ್ಷಿಸಿಕೊಳ್ಳಿ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ, ಮಾತನಾಡಿ ಕುಷ್ಠರೋಗ ಯಾವುದೇ ದೇವರ ಶಾಪ ಹಾಗೂ ಪಾಪ ಮಾಡವುದುರಿಂದ ಬರುವುದಿಲ್ಲ. ಇದು ಮೈಕ್ರೊಬ್ಯಾಕ್ಟಿರಿಯಾ ಲೆಪ್ರೈ ಎಂಬ ಸೂಕ್ಷ್ಮಾಣುವಿನಿಂದ ಹರಡುತ್ತದೆ. ಇದಕ್ಕೆ ಸಂಪೂರ್ಣವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇದಕ್ಕೆ ಯಾರೂ ಭಯಪಡುವ ಅಗತ್ಯವಿಲ್ಲ. ಚರ್ಮದ ಯಾವುದೇ ಖಾಯಿಲೆ ಇದ್ದರು ತಮ್ಮ ಮನೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದಾಗ ಪರೀಕ್ಷಿಸಿಕೊಳ್ಳುವಂತೆ ಸಲಹೆ ನೀಡಿದರು.
ಬಳಿಕ ರೈಸ್ ಮಿಲ್ಲಿನಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಸಿಬ್ಬಂದಿಗಳನ್ನು ಹಾಗೂ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿ, ಚಿಕಿತ್ಸೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಡಾ. ಮಹೇಶ ಆಯುಷ್ ವೈದ್ಯರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ ಕೆ, ಮೇಲ್ವಿಚಾರಕರಾದ ವೀರಭದ್ರ್ಪ, ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ಜಯಪ್ರಕಾಶ, ಪರಶುರಾಮ, ರಾಜಶೇಖರ, ದಾನನಗೌಡ ಎಸ್.ಟಿ.ಎಸ್ ಇಬ್ರಾಹಿಂಸಾಬ್, ರಾಘವೇಂದ್ರ ಸೇರಿದಂತೆ ಇತರರು ಇದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 