ಗದಗ 22: ಗದಗ ಜಿಲ್ಲಾ ಪಂಚಾಯತ್ ದ ಉಪಾಧ್ಯಕ್ಷರಾಗಿ ಶಕುಂತಲಾ ಮೂಲಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆಗಳ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ ಅವರು ಘೋಷಿಸಿದರು.
ಗದಗ ಜಿ.ಪಂ. ಉಪಾಧ್ಯಕ್ಷರ ಸ್ಥಾನವನ್ನು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿತ್ತು. ಉಪಾಧ್ಯಕ್ಷರ ಸ್ಥಾನಕ್ಕೆ ಒಂದೇ ನಾಮಪತ್ರ ಸ್ವೀಕಾರವಾಗಿತ್ತು. ಶಕುಂತಲಾ ಆರ್ ಮೂಲಿಮನಿ ಹುಲಕೋಟಿ ಮತಕ್ಷೇತ್ರದಿಂದ ಆಯ್ಕೆಯಾದವರು. ಗದಗ ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ , ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಉಪಕಾರ್ಯದಶರ್ಿ ಎಸ್.ಸಿ. ಮಹೇಶ, ಸ್ಥಾಯಿ ಸಮಿತಿಯ ಅಧ್ಯಕ್ಷರುಗಳು, ಜಿ.ಪಂ. ಸದಸ್ಯರುಗಳು, ಉಪಸ್ಥಿತರಿದ್ದರು.