ಗದಗ: ಅಂಗನವಾಡಿ ಕಾರ್ಯಕರ್ತೆಯರಿಂದ ಮತದಾನದ ಜಾಗೃತಿ

ಗದಗ 26:  ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ  ಮತದಾರರರ ನೊಂದಣಿ ಹಾಗೂ ಮತದಾನದ ಜಾಗೃತಿಯನ್ನು ಮೂಡಿಸಲು ಗದಗ ಜಿಲ್ಲಾ ಸ್ವೀಪ್ ಸಮಿತಿಯ  ಸೂಚನೆಯಂತೆ ನಮ್ಮ ಮತ ನಮ್ಮ ಹಕ್ಕು ಎಂಬ ಘೋಷಣೆಗಳೊಂದಿಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿವಾಜಿ ವೃತ್ತದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಾನವ ಸರಪಳಿ ಮೂಲಕ  ಸಾರ್ವಜನಿಕರಿಗೆ ಮತದಾನದ ಜಾಗೃತಿಯನ್ನು ಮೂಡಿಸಿದರು.