ರೋಗಿಗಳೊಂದಿಗೆ ಸೌಜನ್ಯದಿಂದ ವತರ್ಿಸಿ: ಓಲೇಕಾರ
ಹಾವೇರಿ10: ವೈದ್ಯ ವೃತ್ತಿಯು ಪವಿತ್ರವಾದ ವೃತ್ತಿಯಾದೆ ಹಾಗೂ ವೈದ್ಯರನ್ನು ದೇವರಿಗೆ ಹೋಲಿಸುತ್ತಾರೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವತರ್ಿಸಿ, ಸೂಕ್ತ ಚಿಕಿತ್ಸೆ ನೀಡುವುದರೊಂದಿಗೆ ರೋಗಿಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಕೆಲಸಮಾಡಬೇಕು ಎಂದು ಶಾಸಕ ನೆಹರು ಓಲೇಕಾರ ಅವರು ಹೇಳಿದರು.
ಗುರುವಾರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಆಯುಷ್ಮಾನ್ ಭಾರತ-ಆರೋಗ್ಯ ಕನರ್ಾಟಕ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿಗಳು ಗ್ರಾಮೀಣ ಭಾಗದ ಮಹಿಳೆಯರಿಗೆ ಹೊಗೆಮುಕ್ತ ವಾತಾವರಣ ನಿಮರ್ಾಣಕ್ಕೆ ಅನಿಲಭಾಗ್ಯ ಯೋಜನೆ ಜಾರಿಗೆ ತಂದರು. ಈಗ ಜನಸಾಮಾನ್ಯರನ್ನು ಗಮದಲ್ಲಿಟ್ಟುಕೊಂಡು ಮಹತ್ವದವಾದ ಆಯುಷ್ಮಾನ್ ಭಾರತ-ಆರೋಗ್ಯ ಕನರ್ಾಟಕ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಸಮಾಜದ ಅರ್ಹ ಫಲಾನುಭವಿಗಳಿಗೆ ಈ ಯೋಜನೆ ತಲುಪಿಸುವ ಕೆಲಸವಾಗಬೇಕು. ಯೋಜನೆಯಡಿ ಬಿಪಿಎಲ್ ಫಲಾನುಭವಿಗಳಿಗೆ ವಾಷರ್ಿಕ ಐದು ಲಕ್ಷ ರೂ.ವರೆಗೆ ವೈದ್ಯಕೀಯ ಚಿಕಿತ್ಸೆ ವೆಚ್ಚ ಭರಿಸಲಾಗುವುದು. ಎಪಿಎಲ್ ಫಲಾನುಭವಿಗಳಿಗೆ ಶೇ.30ರಷ್ಟು ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಈ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು "ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್" ಎಂಬ ಸ್ವಾಯತ್ತ ಸಂಸ್ಥೆಯ ಮೂಲಕ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಲಲಿತಾ ಹಾಗೂ ಜಗದೀಶ ಅವರಿಗೆ ಆರೋಗ್ಯ ಕಾಡರ್್ನ್ನು ಪ್ರಾಯೋಗಿಕವಾಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗರಾಜ ನಾಯಕ್, ಪಾರ್ವತಿ ಪಾಟೀಲ, ಬಸವರಾಜ ಕಾಯಕ, ನಾಗಪ್ಪ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 