ಧರ್ಮಸೇನಾ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಿ: ಮಹಾನಂದಾ ಅಮರಾಪೂರ

ಧರ್ಮಸೇನಾ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಿ: ಮಹಾನಂದಾ ಅಮರಾಪೂರ   Give Dharmasena a seat in the Legislative Council: Mahananda Amarapura

ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಪರಿಶಿಷ್ಟ ಜಾತಿ ಸಮುದಾಯದ ನಾಯಕಆರ್‌. ಧರ್ಮಸೇನಾ ಅವರಿಗೆ ವಿಧಾನ ಪರಿಷತ್ ಸದಸ್ಯ (ಎಂಎಲ್ಸಿ) ಸ್ಥಾನ ನೀಡಿ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಕೆಪಿಸಿಸಿ ರಾಜ್ಯ ಪರಿಶಿಷ್ಟೆಜಾತಿ ವಿಭಾಗದ ಸಂಚಾಲಕಿ ಮಹಾನಂದಾ ಅಮರಾಪೂರ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್‌. ಧರ್ಮಸೇನಾ ಅವರು ಸುಮಾರು 40 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದು, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು. ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಸುಮಾರು ಎಂಟು ವರ್ಷಗಳ ಕಾಲ ಶಾಸಕರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ಧರ್ಮಸೇನಾ ಅವರು ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಸಂಯೋಜಕರಾಗಿ ಹಾಗೂ ಕೇರಳ ರಾಜ್ಯ ಉಸ್ತುವಾರಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದು, ಪಕ್ಷದ ಪರವಾಗಿ ಹಲವು ರಾಜ್ಯಗಳಲ್ಲಿ ಸಂಘಟನೆ ಬಲಪಡಿಸಲು ಶ್ರಮಿಸುತ್ತಿದ್ದಾರೆ ಎಂದರು. ಪರಿಶಿಷ್ಟ ಜಾತಿಯ ತಳ ಸಮುದಾಯಕ್ಕೆ ಸೇರಿದ ಎಡಗೈ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ನ್ಯಾಯ ಒದಗಿಸಬೇಕಿದ್ದು, ಧರ್ಮಸೇನಾ ಅವರಿಗೆ ಎಂಎಲ್ಲಿ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯದ ಬದ್ಧತೆಯನ್ನು ತೋರಿಸಬೇಕು. ನೂತನ ಸರ್ಕಾರದಲ್ಲಿ ಅವರಿಗೆ ಸಚಿವ ಸ್ಥಾನ ನೀಡಿ ಅವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಪಕ್ಷದ ಹಿರಿಯ ನಾಯಕರಿಗೆ ಗೌರವ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮ ಸಲಹೆಗಾರ ನೀತೀನ್ ಒಡೆಯರ್, ಸಂಜೀವ ಅಮರಾಪೂರ, ಯಲ್ಲುಬಾಯಿ  ದುರ್ಗವನ್ನು ಮೇತ್ರಿ, ರಾಮವ್ವ ಸವದತ್ತಿ, ಸರೋಜಿನಿ  ಐಹೊಳೆ, ಹರಿಪ್ರಸಾದ ಉತ್ತೂರ, ಮನೋಜ ಉತ್ತೂರ, ಪವನ ಒಂಟಗೋಡಿ ಇದ್ದರು.