ಶಿಕ್ಷಣ, ಆರೋಗ್ಯ, ಸ್ವಚ್ಛತೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ಡಾ. ಶೈಲೇಂದ್ರ
ಶಿಕ್ಷಣ, ಆರೋಗ್ಯ, ಸ್ವಚ್ಛತೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ಡಾ. ಶೈಲೇಂದ್ರ
ಬೀದರ್ 07: ಪ್ರತಿಯೊಂದು ಗ್ರಾಮದಲ್ಲಿರುವ ಮನೆಗಳಿಗೆ ಶೌಚಾಲಯ ಅಗತ್ಯವಾಗಿದೆ ಹೀಗಾಗಿ ಪ್ರಧಾನಿ ಮಂತ್ರಿಗಳ ಮಹತ್ವಾಕಾಂಕ್ಷೆಯ ಯೋಜನೆಯಾದ ಶೌಚಾಲಯ ನಿರ್ಮಾಣಕ್ಕೆ ಒತ್ತು ನೀಡಬೇಕು ಎಲ್ಲಾ ಗ್ರಾಮಗಳಲ್ಲಿ ಬಯಲು ಬಹಿರ್ಧೆಸೆ ಮುಕ್ತ ನೀಡಬೇಕು ಪ್ರತಿಯೊಂದು ಗ್ರಾಮದಲ್ಲಿ ಸ್ವಚ್ಛತೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಸೂಚಿಸಿದರು.
ಬೀದರ್ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ 2023-24ನೇ ಸಾಲಿನ ಪ್ರಗತಿ ಪರೀಶೀಲನಾ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿಯ ಹಾಗುಹೋಗುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಪಾರ ದರ್ಶಕವಾಗಿ ಆಡಳಿತ ನಡೆಸಬೇಕಾಗುತ್ತದೆ ಎಲ್ಲಾ ಅಧಿಕಾರಿಗಳು ಜನರಿಗೆ ಉತ್ತಮ ಸ್ಪಂದನೆ ನೀಡಬೇಕು ಎಂದರು. ಕ್ಷೇತ್ರದ ಅಭಿವೃದ್ಧಿಗೆ ಇಲಾಖೆ ಇಲಾಖೆಗಳ ಮಧ್ಯದಲ್ಲಿ, ಇಲಾಖೆ ಜನಪ್ರತಿನಿಧಿಗಳ ಮಧ್ಯದಲ್ಲಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮನ್ವಯ ನಿರಂತರ ಇರಬೇಕು. ಇಲಾಖೆ ಕೆಲಸ ಕಾರ್ಯಗಳಲ್ಲಿ ಶಿಸ್ತು ಬದ್ದತೆ ಇರಬೇಕು. ಎಲ್ಲ ಗ್ರಾಮ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮಟ್ಟದ ಸಿಬ್ಬಂದಿಗಳೊಂದಿಗೆ ನೇರ ಸಂಪರ್ಕವಿದ್ದು, ಕಾಲಕಾಲಕ್ಕೆ ಕಾಮಗಾರಿ, ಯೋಜನೆಗಳ ಪ್ರಗತಿಯನ್ನು ಪರೀಶೀಲಿಸಿ, ಅದರ ಪ್ರಾಥಮಿಕ ಮಾಹಿತಿ ಹೊಂದಿರಬೇಕು. ಇಲಾಖೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ, ಲೋಪ, ಕಳಪೆ ಕಂಡು ಬಂದಲ್ಲಿ ಇಲಾಖಾ ಮುಖ್ಯಸ್ಥರನ್ನು ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಇಲಾಖೆ ಕಾರ್ಯಕ್ರಮಗಳ ಪೂರ್ಣ ಮಾಹಿತಿ ಹೊಂದಿರಬೇಕು ಎಂದು ಅವರು ತಿಳಿಸಿದರು.
ಎಲ್ಲ ಗ್ರಾಮಗಳಲ್ಲಿಗ್ರಾಮಗಳಲ್ಲಿ ಮನೆ-ಮನೆಗಳಿಂದ ಸಂಗ್ರಹಿಸಬೇಕಿರು ಹಸಿ ಮತ್ತು ವಣ ಕಸಗಳನ್ನು ವಿಂಗಡಣೆ ಮಾಡಿ ಸಮಗ್ರವಾಗಿ ನಿರ್ವಹಣೆ ಮಾಡುವ ಬಗ್ಗೆ ಎಲ್ಲಾ ಪಂಚಾಯತಿಗಳ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳು ಹೆಚ್ಚಿನ ಗಮನಹರಿಸುವುದು ಅತ್ಯಂತ ಅವಶ್ಯಕತೆಯಿದೆ ಎಂದು ತಿಳಿಸಿದರು.
*ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ*
ಮುಂಗಾರು ಹಿಂಗಾರು ಹಂಗಾಮಿನಲ್ಲಿ ರೈತರಿಗೆ ಉತ್ತಮ ಬಿತ್ತನೆ ಬೀಜ ನೀಡಬೇಕು ಆಯಾ ಬೆಳೆಗಳಿಗೆ ಉತ್ತಮ ಓಷಧಿ ವಿತರಣೆ ಮಾಡಿ ಉತ್ತಮ ಬೆಳೆ ಬೆಳೆಯಲು ಸಲಹೆ ನೀಡಿ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ರೈತ ಸಂಪರ್ಕ ಕೇಂದ್ರದಲ್ಲಿ ಸರ್ಕಾರದಿಂದ ರೈತರಿಗಾಗಿ ಬರುವ ಹನಿ ನೀರಾವರಿ, ತುಂತುರು ನೀರಾವರಿ ಯೋಜನೆ ಸಮರ್ಕವಾಗಿ ಪೂರೈಸಿ ಅದೇ ರೀತಿ ರಿಯಾಯ್ತಿ ದರದ ಸಲಕರಣೆಗಳು ರೈತರಿಗೆ ನೀಡಬೇಕು.
ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡುವಾಗ ಸಣ್ಣ ಮತ್ತು ಮಧ್ಯಮ ರೈತರಿಗೆ ಆದ್ಯತೆ ನೀಡಬೇಕು. ಧ್ವನಿ ಇಲ್ಲದವರಿಗೆ ನಾವು ಶಕ್ತಿ ತುಂಬಬೇಕು. ಅರ್ಹರಿಗೆ, ಬಡವರಿಗೆ ಸರಕಾರದ ಸವಲತ್ತುಗಳು ನಿಯಮಾನುಸಾರ ಪಾರದರ್ಶಕವಾಗಿ ತಲುಪಿಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಯಾವೊಬ್ಬ ಸರಕಾರಿ ನೌಕರ ಮರೆಯಬಾರದು ಎಂದು ಹೇಳಿದರು.
ಕ್ಷೇತ್ರದ್ಯಾಂತ ಕಳೇದೆರಡು ವರ್ಷಗಳಿಂದ ಪ್ರಗತಿಯಲ್ಲಿರುವ ಬಾಕಿ ಉಳಿದಿರುವ ಸುಮಾರು ಕಾಮಗಾರಿಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಮುಕ್ತಾಯಗೋಳಿಸದೇ ಇರುವುದು ಕಂಡುಬಂದಯರೇ ಸಂಭಂಧಿಸಿದ ಅಧಿಕಾರಿ/ಸಿಬ್ಬಂದಿಗಳು ಈಬಗ್ಗೆ ತುರ್ತಾಗಿ ಕಾಮಗಾರಿವಾರು ಮತ್ತೊಮ್ಮೆ ಪರೀಶೀಲಿಸಿ ಮುಕ್ತಾಯಗೊಳಿಸಬೇಕು.ಸರ್ಕಾರಿ ಸ್ಥಳ ಕಬಳಿಸುತ್ತಿರುವ ದು ಮತ್ತು ಕೆರೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಸಬೇಕು. ಒತ್ತುವರಿಯಿಂದ ಅಚ್ಚುಕಟ್ಟು ಪ್ರದೇಶಕ್ಕೆ ಕೊರತೆಯಾಗುತ್ತದೆ. ನರೇಗಾದಲ್ಲಿ ಕೆರೆ ಹೂಳು ತೆಗೆದು ಕೆರೆಗಳಿಗೆ ಮರು ಜೀವ ಒದಗಿಸಬೇಕೆಂದು ತಿಳಿಸಿದರು.
*ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ.*
ಸರ್ಕಾರಿ ಶಾಲೆಗಳಿಗೆ ಶಿಕ್ಷಣಾಧಿಕಾರಿ, ಗ್ರಾಮಪಂಚಾಯಿತ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿ ನರೆಗಾದಡಿ ಕೌಂಪಾಡ ವಾಲ್, ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಕೊರತೆ ಪರಿ ಹರಿಸಲು ಮುಂದಾಗಬೇಕು ಮತ್ತು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗದಂತೆ ಶಿಕ್ಷಣ ಅಧಿಕಾರಿಗಳು ಶಿಕ್ಷಕರು, ಗ್ರಾಪಂ ಪಿಡಿಒಗಳು ನಿಗಾ ವಹಿಸಬೇಕು ಶಾಲೆಗಳಲ್ಲಿ ನೀಡುವ ಶಿಕ್ಷಣ, ಬಿಸಿ ಊಟ, ಶಾಲೆ ಬಟ್ಟೆ, ಶೂ ವಿತರಣೆ ಇನ್ನಿತರ ಸೌಲಭ್ಯಗಳು ಸಮರ್ಕವಾಗಿ ಪೂರೈಕೆಯಾಗುತ್ತದೆಯೋ ಎನ್ನುವದರ ಬಗ್ಗೆ ಪರೀಶೀಲನೆ ನಡೆಸಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
*ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಿ*
ಕ್ಷೇತ್ರದ ಎಲ್ಲಾ ಸರ್ಕಾರಿ ಆಸ್ಪತ್ರೆಯ ಪಿಎಚ್ ಸಿ, ಸಿಎಚ್ ಸಿ ಗಳಲ್ಲಿ ವೈದ್ಯರು ಜನರಿಗೆ ಉತ್ತಮ ಸ್ಪಂದನೆ ನೀಡಬೇಕು ಎಲ್ಲ ಗ್ರಾಮದಲ್ಲಿ ಜನರ ಆರೋಗ್ಯ ಕುರಿತು ಕಾಳಜಿ ವಹಿಸುವುದು ಅತ್ಯಂತ ಅವಶ್ಯಕವಾಗಿದೆ ಹೀಗಾಗಿ ವೈದ್ಯರು ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಸಹಾಯದಿಂದ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಲೋಕೋಪಯೋಗಿ ಇಲಾಖೆ, ಪಂಚಾಮತ್ ರಾಜ ಇಲಾಖೆ ಅಧಿಕಾರಿಗಳು ರಸ್ತೆ ಪ್ರಗತಿಯಲ್ಲಿರುವ ಕಾಮಗಾರಿ ಕುರಿತು ನಿಗಾ ವಹಿಸಬೇಕು ಮತ್ತು ಅವಶ್ಯಕತೆ ಇರುವ ರಸ್ತೆ ಬಗ್ಗೆ ಮಾಹಿತಿ ಪಡೆದುಕೊಂಡು ಮುಂದಿನ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕುರಿತು ಪಟ್ಟಿ ಮಾಡಬೇಕು ರಸ್ತೆ ಪಕ್ಕದಲ್ಲಿ ಮರಗಳು ಬೆಳೆದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದರೆ ತಕ್ಷಣ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು ಅಲ್ಲಲ್ಲಿ ಇರುವ ತಗ್ಗು ಗುಂಡಿಗಳು ಮುಚ್ಚಿಸಬೇಕು ಎಂದರು.
ಅಂಗನವಾಡಿ ಕಟ್ಟಡಗಳಲ್ಲಿ ಬಡ ಮಕ್ಕಳಿಗೆ ಉತ್ತಮ ಪಾಲನೆ ಪೋಷಣೆ ಮಾಡಬೇಕು ಸರ್ಕಾರದಿಂದ ಬಂದ ಪೊಷ್ಠಿಕತೆ ಪದಾರ್ಥ ಉತ್ತಮವಾಗಿ ಪೂರೈಸುವ ಮೂಲಕ ಮಕ್ಕಳ ಆರೋಗ್ಯ ಕುರಿತು ಕಾಳಜಿ ವಹಿಸಬೇಕು ಎಂದರು. ಎಲ್ಲಾ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ನೀಡಿ ಜನರ ಆರೋಗ್ಯ ಕಾಪಾಡಬೇಕು ಎಂದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತಕರು ಮೊಹಮ್ಮದ ಶಕೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕಿರಣಕುಮಾರ ಇದ್ದರು.ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕರ, ಸಲಹೆಗಾರ ನಾಗೇಶ್ ಸಿದ್ಧಾ.