ಸರ್ಕಾರಿ ನೌಕರರ ಸಂಘದ ಚುನಾವಣೆ :ಗಡ್ಡಿ ಶಿವಕುಮಾರ್ ಆಯ್ಕೆ
ಸರ್ಕಾರಿ ನೌಕರರ ಸಂಘದ ಚುನಾವಣೆ :ಗಡ್ಡಿ ಶಿವಕುಮಾರ್ ಆಯ್ಕೆ
ಹೂವಿನ ಹಡಗಲಿ 31: 2024-25 ನೇ ಸಾಲಿನ ಸರ್ಕಾರಿ ನೌಕರರ ಸಂಘದ ತಾಲೂಕು ನಿರ್ದೇಶಕರ ಆಯ್ಕೆಯಲ್ಲಿ ಪ್ರೌಢಶಾಲಾ ವಿಭಾಗದಿಂದ ಗಡ್ಡಿ ಶಿವಕುಮಾರ್ ಆಯ್ಕೆ ಯಾಗಿದ್ದಾರೆ. ಪಟ್ಟಣದ ಸೊಪ್ಪಿನ ಕಾಳಮ್ಮ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿರುವ ಈಗಾಗಲೇ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳ ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಬೆಂಬಲಿಸಿದ ಎಲ್ಲಾ ಸರ್ಕಾರಿ ಪ್ರೌಢಶಾಲೆಗಳ ಶಿಕ್ಷಕ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.