ಭಾರತೀಯ ನೌಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಜ್ಯಪಾಲ
Governor participates in Indian Navy Day celebrations
ಕಾರವಾರ 04: ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐ.ಎನ್.ಎಸ್ ಕದಂಬ ನೌಕಾನೆಲೆಯ , ನೌಕಾದಳ ಭವನದ ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.
1971ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಯುದ್ಧದಲ್ಲಿ ಡಿ.4ರಂದು ಕರಾಚಿಯ ಬಂದರಿನ ಮೇಲೆ ದಾಳಿ ನಡೆಸಿ ಭಾರತವು ವಿಜಯ ಸಾಧಿಸಿದ ನೆನಪಿಗೆ ಭಾರತೀಯ ನೌಕಾದಿನ ಆಚರಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ನೌಕಾ ಸಿಬ್ಬಂದಿ ವಾದ್ಯ ಪರಿಕರಗಳಲ್ಲಿ ದೇಶಭಕ್ತಿ ಗೀತೆಗಳನ್ನು ನುಡಿಸಿದರು. ಬ್ಯಾಂಡ್ ಸಿಬ್ಬಂದಿ ಬೀಟಿಂಗ್ ರಿಟ್ರೀಟ್ ಮೂಲಕ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು. ನಂತರ ನೌಕಾಪಡೆಯ ಧ್ವಜದ ಅವರೋಹಣ ಮಾಡಲಾಯಿತು. ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ನೌಕೆಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೌಕೆಗಳಿಂದ ಸಿಡಿಮದ್ದುಗಳನ್ನು ಸಿಡಿಸಲಾಯಿತು. ನೌಕಾಪಡೆಯ ಸಿಬ್ಬಂದಿ, ನೌಕಾ ಅಗ್ನಿವೀರರು, ನೌಕಾನೆಲೆ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕರ್ನಾಟಕ ನೌಕಾ ನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆಠ್ ಆಫಿಸರ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ, ಜಿ. ಪಂ. ಸಿಇಓ ಡಾ. ದೀಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೀಪನ್ ಎಂ. ಎನ್. , ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹಾಗೂ ನೌಕಾಪಡೆಯ ಅಧಿಕಾರಿಗಳು ಮತ್ತಿತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 