ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಅತೀ ಹೆಚ್ಚು ಪ್ರೋತ್ಸಾಹ : ಚನ್ನರಾಜ ಹಟ್ಟಿಹೊಳಿ
Greater encouragement for sports in rural areas: Channaraja Hattiholi
ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಅತೀ ಹೆಚ್ಚು ಪ್ರೋತ್ಸಾಹ : ಚನ್ನರಾಜ ಹಟ್ಟಿಹೊಳಿ
ಬೆಳಗಾವಿ 01: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದ ಶ್ರೀ ಬ್ರಹ್ಮಲಿಂಗ ಮಂದಿರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಬಡ್ಡಿ ಸ್ಪರ್ಧೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿ, ಚಾಲನೆ ನೀಡಿದರು.ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಲಾಗುತ್ತಿದೆ. ಸರಕಾರದಿಂದಷ್ಟೇ ಅಲ್ಲ, ವಯಕ್ತಿಕವಾಗಿ ಹಾಗೂ ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಸಹ ಸಾಕಷ್ಟು ಸಹಾಯ ಮಾಡಲಾಗುತ್ತಿದೆ. ಯುವಕರು ಹಾಗೂ ಮಕ್ಕಳು ಸರ್ವಾಂಗೀಣ ಅಭಿವೃದ್ಧಿಯಾಗಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ನಾಯ್ಕ್, ಮನೋಹರ್ ಬೆಳಗಾಂವ್ಕರ್, ನಾಮದೇವ್ ಮೋರೆ, ಅಶೋಕ ಕಾಂಬಳೆ, ಸಂತೋಷ ಕಾಂಬಳೆ, ಶಿವಾಜಿ ಬೋಕಡೆ, ತಾನಾಜಿ ಬಿ, ಶಿವಾಜಿ ರಾಕಸೆ, ಮಂಗಲ ಜಾಧವ್, ಪ್ರಕಾಶ ಬಾಸ್ಕಳ್, ಕಲ್ಲಪ್ಪ ಬಾಸ್ಕಳ್, ಗುರುನಾಥ ಪಾಟೀಲ, ಜಯವಂತ ಬಾಳೇಕುಂದ್ರಿ, ಬಾಳು ದೇಸೂರಕರ್, ಮಹೇಶ ಪಾಟೀಲ, ಸಚಿನ್ ಜಾಧವ್, ಶಿವಾಜಿ ಮಂದಾರ್ ಮುಂತಾದವರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 