ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಆಗುತ್ತಿಲ್ಲ: ಶ್ರೀಮಂತ ಪಾಟೀಲ
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಆಗುತ್ತಿಲ್ಲ: ಶ್ರೀಮಂತ ಪಾಟೀಲ
ಕಾಗವಾಡ 10: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಳೆದ ಒಂದುವರೆ ವರ್ಷದಿಂದ ಅಧಿಕಾರದಲ್ಲಿದ್ದು, ಚುನಾವಣೆಯಲ್ಲಿ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕಷ್ಟಪಡುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲವಾದ್ದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲವೆಂದು ಮಾಜಿ ಸಚಿವ ಹಾಗೂ ಮಾಜಿ ಶಾಸಕ ಶ್ರೀಮಂತ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅವರು ತಾಲೂಕಿನ ಕೆಂಪವಾಡ ಸಕ್ಕರೆ ಕಾರ್ಖಾನೆಯಲ್ಲಿ ಇತ್ತಿಚಿಗೆ ಮಾಧ್ಯಮದವರಿಗೆ ಪ್ರತಿಕ್ರೀಯಿಸಿ, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಗುತ್ತಿಲ್ಲ. ಕಳೆದ ಒಂದೂವರೆ ವರ್ಷದಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ.ಸುಮಾರು 25 ಸಾವಿರ ಎಕರೆಗೆ ನೀರಾವರಿ ಕಲ್ಪಿಸುವ ಕ್ಷೇತ್ರದ ಮಹತ್ವಾಕಾಂಕ್ಷಿ ಬಸವೇಶ್ವರ ಏತ ನೀರಾವರಿ ಯೋಜನೆಗೂ ಸಹ ಅನುದಾನ ಸಿಕ್ಕಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಳ್ಳಲು ಪಂಚ ಗ್ಯಾರಂಟಿಗಳೇ ಕಾರಣ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವೃ ವಾಗ್ದಾಳಿ ಮಾಡಿದ್ದಾರೆ.