ಎಚ್.ಟಿ. ಕುಲಕರ್ಣಿ ಗುರುಸ್ಮರಣೆ ಕಾರ್ಯಕ್ರಮ ಸೆ.6
H.T. Kulkarni Gurusmarane Program Sep.6
ಲೋಕದರ್ಶನ ವರದಿ
ಸಿಂದಗಿ ಸೆ.4: ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ಸೆ.6ರಂದು ಬೆಳಿಗ್ಗೆ 10 ಗಂಟೆಗೆ ನಿವೃತ್ತ ದೈಹಿಕ ಶಿಕ್ಷಕ ಎಚ್.ಟಿ. ಕುಲಕರ್ಣಿ ಅವರ ಗುರುಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಕ ಎಸ್.ಎಸ್. ಮಲ್ಲೇದ ತಿಳಿಸಿದರು.
ಪಟ್ಟಣದ ಬಸವ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಂಗಮಠದ ಪೂಜ್ಯಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಕಾರ್ಯಕ್ರಮದ ಪಾವನ ಸಾನ್ನಿಧ್ಯ ವಹಿಸಲಿದ್ದು, ಊರಿನ ಹಿರಿಯಮಠದ ಶಿವಾನಂದ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಎಸ್.ಟಿ. ಸುಣಗಾರ, ಅಶೋಕ ಶಾಬಾದಿ, ರಮೇಶ ಭೂಸನೂರ, ಅರುಣ ಶಹಾಪುರ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕುಲಕರ್ಣಿ ಅವರ ಸಹೋದರ ಬಿ.ಟಿ. ಕುಲಕರ್ಣಿ ಹಾಗೂ ಪುತ್ರ ಪವನ ಕುಲಕರ್ಣಿ ಉಪಸ್ಥಿತರಿರುವರು.
ಕಾರ್ಯಕ್ರಮದ ಅಂಗವಾಗಿ ದೇಹದಾನ, ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ ಹಾಗೂ ಬಿಪಿ ಮತ್ತು ಶುಗರ್ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ರಣಧೀರ ಪಡೆ ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಮಣಿಗಿರಿ ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 