ಹನುಮಂತ ನಂದಿ ಬೆಳಗಾವಿ ಹೆಮ್ಮೆ: ಡಾ. ರಾಜಶೇಖರ ಬಿರಾದಾರ
Hanuman Nandi is the pride of Belgaum: Dr. Rajashekar Biradar
ಹನುಮಂತ ನಂದಿ ಬೆಳಗಾವಿ ಹೆಮ್ಮೆ: ಡಾ. ರಾಜಶೇಖರ ಬಿರಾದಾರ
ಯರಗಟ್ಟಿ, 09 ; ದೇಶದಲ್ಲಿಯೇ ಅತ್ಯಂತ ಕಠಿಣತಮ ಪರೀಕ್ಷೆಯಾಗಿರುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮೂಲಕ ಹನುಮಂತ ನಂದಿಯವರು ಬೆಳಗಾವಿಯ ಜಿಲ್ಲೆಯ ಹೆಮ್ಮೆಯ ಸುಪುತ್ರರಾಗಿದ್ದಾರೆ ಎಂದು ಸಿ.ಎಂ. ಮಾಮನಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಹೇಳಿದರು.ಸಮೀಪದ ಸತ್ತಿಗೇರಿ ಗ್ರಾಮದ ಕರ್ನಾಟಕ ಪಬ್ಲಿಕ ಶಾಲೆಯಲ್ಲಿ ನಡೆದ ಅಭಿಪ್ರೇರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಆರಂಭಿಕ ಸೋಲುಗಳಿಗೆ ಎದೆಗುಂದದೆ ಅವಿರತ ಶ್ರಮದಿಂದ ಭಾರತೀಯ ರೈಲ್ವೆ ಅಧಿಕಾರಿಯಾಗಿ ಆಯ್ಕೆಯಾಗಿರುವ ನಂದಿಯವರ ಜೀವನ ಹಾಗೂ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೇರಣೆಯಾಗಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಹನುಮಂತ ನಂದಿಯವರು ಮಾತನಾಡಿ ಸತ್ತಿಗೇರಿ ಪ್ರೌಢಶಾಲಾ ದಿನಗಳ ಸ್ನೇಹಿತರು ಮತ್ತು ಗುರುಗಳನ್ನು ಸ್ಮರಿಸಿಕೊಂಡು, ತಮ್ಮ ಕೇಂದ್ರ ನಾಗರಿಕ ಸೇವಾ ಪರೀಕ್ಷಾ ಸಿದ್ಧತೆಯ ಕುರಿತು ವಿವರವಾಗಿ ಮಾತನಾಡಿ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಂಯಯಮದಿಂದ ಉತ್ತರಿಸಿದರು.ಶಿಕ್ಷಣ ಸಂಯೋಜಕ ಶ್ರೀಕಾಂತ ಕರಲಿಂಗಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರಾಚಾರ್ಯರಾದ ನಾಗರಾಜು ಕೆ. ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವ ಮುಖಂಡ ಈರಣ್ಣ ಹೊಸಮನಿ ಸೇರಿದಂತೆ ಶಾಲೆಯ ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 