ಹಾವೇರಿ ಜಿಲ್ಲಾ ಮಟ್ಟದ ರಸಪ್ರಶ್ನೆ : ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ
ರಾಣೇಬೆನ್ನೂರು: ಡಿ 5 ಕೇಂದ್ರ ಚುನಾವಣಾ ಆಯೋಗ ದೆಹಲಿ ಇವರ ಆದೇಶದಂತೆ ರಾಷ್ಟ್ರೀಯ ಮತದಾರ ದಿನಾಚರಣೆ ಪ್ರಯುಕ್ತ ಹಾವೇರಿ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿತ್ತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಾರುತಿ ನಗರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪವನ್ ಜೋಗಾರ್ ಮತ್ತು ಮೋಹನ್ ಜೋಗಾರ್, ಅವರು, ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಿಕ್ಷಕ, ಶಿವರಾಜ್ ಅಡರಕಟ್ಟಿ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಮಾರ್ಗದರ್ಶಕರಾಗಿದ್ದರು. ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ವಿದ್ಯಾರ್ಥಿಗಳು ಶಿಕ್ಷಕರು, ಶಿಕ್ಷಕರು ಮತ್ತು ಸಿಬ್ಬಂದಿ ಹಾರ್ದಿಕವಾಗಿ ಅಭಿನಂದಿಸಿದ್ದಾರೆ