ತಾಳಿಕೋಟಿ

ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ 75 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ

ಎಸ್ ಎಸ್   ವಿದ್ಯಾಸಂಸ್ಥೆಯಲ್ಲಿ 75 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ

ತಾಳಿಕೋಟೆ 16: ನಗರದ ಎಸ್ ಎಸ್  ವಿದ್ಯಾಸಂಸ್ಥೆಯಲ್ಲಿ 75ನೇ ಸ್ವಾತಂತ್ರದ ಅಮೃತಮಹೋತ್ಸವ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ ಎಚ ಎಸ ಪಾಟೀಲ ನೆರವೇರಿಸಿದರು. ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷರು ಮಾತನಾಡಿ ಭಾರತ ಕಳೆದ 75 ವರ್ಷಗಳ ಅವಧಿಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಹೋರಾಟ ನಡೆಸಿ ತಮ್ಮ ಪ್ರಾಣವನ್ನು ಬಲಿದಾನ ನೀಡಿದ್ದಾರೆ ಅಂತಹ ದೇಶಭಕ್ತರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿ ಗೌರವ ಸಮರ್ಪಸುವುದು ಪ್ರತಿಯೊಬ್ಬ ಭಾರತೀಯ ಕರ್ತವ್ಯ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ 10ನೇ ತರಗತಿ ವಿದ್ಯಾರ್ಥಿಯಾದ ಬಾಬು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಸಂಸ್ಥೆಗೆ ಕಾಣಿಕೆ ನೀಡಿದರು. ಈ ಸಮಯದಲ್ಲಿ ಸಂಸ್ಥೆ ಗುರುವೃಂದ  ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

 

ಸುದ್ದಿ ಓದಿ