ಹೋಳಿ ಹಬ್ಬ ಆಚರಣೆ

ಹೋಳಿ ಹಬ್ಬ ಆಚರಣೆ


  ಬೀದರ್  04: ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಕಚೇರಿಯಲ್ಲಿ ಬಣ್ಣಗಳ ಹಬ್ಬವಾದ ಹೋಳಿ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಪರಸ್ಪರ ಬಣ್ಣಗಳನ್ನು ಎರಚಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಬ್ಬದ ಸಂಭ್ರಮದಲ್ಲಿ ಏಕತೆ, ಸಹಕಾರ ಮತ್ತು ಸೌಹಾರ್ದತೆಯ ಸಂದೇಶ ಮತ್ತಷ್ಟು ಬಲವಾಗಿ ಪ್ರತಿಧ್ವನಿಸಿತು.ಈ ಹೋಳಿ ಹಬ್ಬವು ಎಲ್ಲರ ಜೀವನದಲ್ಲೂ ಸಂತೋಷ, ಸಮೃದ್ಧಿ ಮತ್ತು ಹೊಸ ಆಶಾವಾದವನ್ನು ತರಲಿ ಎಂದು ಹಾರೈಸಿದರು.ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ ಸಹಾಯಕ ನಾಗೇಶ ಸಿದ್ದಾ. 


ಸುದ್ದಿ ಓದಿ