ಗ್ರಾ.ಪಂ ನೌಕರರ ಸಂಘದ (ಸಿಐಟಿಯು) ಪದಾಧಿಕಾರಿಗಳಿಗೆ ಸನ್ಮಾನ
Honored to the office bearers of the Gram Panchayat Employees' Union (CITU)
ಗ್ರಾ.ಪಂ ನೌಕರರ ಸಂಘದ (ಸಿಐಟಿಯು) ಪದಾಧಿಕಾರಿಗಳಿಗೆ ಸನ್ಮಾನ
ದೇವರಹಿಪ್ಪರಗಿ 06: ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ (ಸಿಐಟಿಯು)ತಾಲೂಕ ಸಮತಿಯ ಅಧ್ಯಕ್ಷ, ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕ ಸಮಿತಿಯ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂ.ರಾ ಸಹಾಯಕ ನಿರ್ದೇಶಕ ಶಿವಾನಂದ ಮೂಲಿಮನಿ, ನರೇಗಾ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಹಾಗೂ ಯೋಜನಾ ಅಧಿಕಾರಿ ಶ್ರೀನಿವಾಸ ಪವಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಗ್ರಾಪಂ ನೌಕರ ಸಂಘದ ಅಧ್ಯಕ್ಷ ಶಿವಾನಂದ ಬಿರಾದಾರ ವಹಿಸಿದ್ದರು. ಜಿಲ್ಲಾ ಮುಖಂಡರಾದ ಚಂದ್ರಶೇಖರ ವಾಲಿಕಾರ, ಲಾಲಹಮ್ಮದ ಶೇಖ್ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ನಿರೂಪಣೆಯನ್ನು ಚಿಕ್ಕರೂಗಿ ಗ್ರಾಪಂ ಕಾರ್ಯದರ್ಶಿ ಚಿದಾನಂದಗೌಡ ಬಿರಾದಾರ ನೆರವೇರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 