ಬೈಲಹೊಂಗಲ

ಹೊಸೂರ: ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಹೊಸೂರ: ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಲೋಕದರ್ಶನ ವರದಿ

ಬೈಲಹೊಂಗಲ 19: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ ಎಂದು ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಂ ಶಿದ್ದನಗೌಡರ ಹೇಳಿದರು.

   ಅವರು ಶುಕ್ರವಾರ ಸಮೀಪದ ಹೊಸೂರ ಗ್ರಾಮದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ ಎಂದರು.

   ಗ್ರಾಪಂ ಅಧ್ಯಕ್ಷೆ ಶ್ರೀದೇವಿ ತಳವಾರ ಧ್ವಜಾರೋಹಣ ನೆರವೇರಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷ ನಾಗಪ್ಪ ಅರೇರ ಅಧ್ಯಕ್ಷತೆ ವಹಿಸಿದ್ದರು.ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

   ಉಮೇಶ ಬೋಳೆತ್ತಿನ, ಶಂಕರ ಕಳ್ಳಿ,ಜಗದೀಶ ಬೂದಿಹಾಳ, ಮಂಜು ಬಡಿಗೇರ,ಎಸ್ ಎಸ್ ಮಲ್ಲನ್ನವರ ಹಾಗೂ ಶಿಕ್ಷಕ ಸಿಬ್ಬಂದಿ ಗ್ರಾಮಸ್ಥರು ಇದ್ದರು 

ಸುದ್ದಿ ಓದಿ