ಬಳ್ಳಾರಿ

ರಾಜ್ಯದ ಹಲವೆಡೆ ಕೆಲವು ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳು ಕೂಡ ವಿದ್ಯಾರ್ಥಿ ವೇತನದಿಂದ ವಂಚಿತ

ರಾಜ್ಯದ ಹಲವೆಡೆ ಕೆಲವು ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳು ಕೂಡ ವಿದ್ಯಾರ್ಥಿ ವೇತನದಿಂದ ವಂಚಿತ

ರಾಜ್ಯದ ಹಲವೆಡೆ ಕೆಲವು ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳು ಕೂಡ ವಿದ್ಯಾರ್ಥಿ ವೇತನದಿಂದ ವಂಚಿತ

ಬಳ್ಳಾರಿ 06 : ಪತ್ರಿಕಾ ಪ್ರಕಟಣೆಕಳೆದ ಮೂರು ವರ್ಷಗಳಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ಲಭ್ಯವಾಗುತ್ತಿಲ್ಲ. ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆ ಅಡಿಯಲ್ಲಿ ಬರುವ ಪದವಿ, ಸ್ನಾತಕೋತ್ತರ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಲಭ್ಯವಾಗುತ್ತಿಲ್ಲ. ರಾಜ್ಯದ ಹಲವೆಡೆ ಕೆಲವು ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳು ಕೂಡ ವಿದ್ಯಾರ್ಥಿ ವೇತನದಿಂದ ವಂಚಿತರಾಗಿದ್ದಾರೆ. ಒಂದೆಡೆ ದಿನದಿಂದ ದಿನಕ್ಕೆ ಶಿಕ್ಷಣದ- ಅದರಲ್ಲೂ, ಉನ್ನತ ಶಿಕ್ಷಣದ ವೆಚ್ಚ ಅತ್ಯಂತ ಅಧಿಕವಾಗುತ್ತಿದೆ ಆದರೆ ಇನ್ನೊಂದೆಡೆ ಕ್ರಮೇಣವಾಗಿ ವಿದ್ಯಾರ್ಥಿ ವೇತನ ಕಡಿತಗೊಳುತ್ತಿರುವುದರಿಂದ ಅಧಿಕ ಪ್ರಮಾಣದ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ದೂರ ತಳ್ಳಲಾಗುತ್ತಿದೆ. ಅದರಲ್ಲೂ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿರುವ ರೈತ, ಕಾರ್ಮಿಕರನ್ನೊಳಗೊಂಡಂತೆ  ಬಡಜನರ ಮಕ್ಕಳ ಶಿಕ್ಷಣದ ಕನಸುಗಳು ಇದರಿಂದ ಛಿದ್ರಗೊಳ್ಳುತ್ತಿವೆ. ಸರ್ಕಾರದ ಈ ನಡೆಯನ್ನು ಎಐಡಿಎಸ್‌ಓ ತೀವ್ರವಾಗಿ ಖಂಡಿಸುತ್ತದೆ. ಈ ಸಮಸ್ಯೆಯ ತೀವ್ರತೆಗೆ ಉದಾಹರಣೆ ಎಂಬಂತೆ ಖಾಸಗಿ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 80,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯುತ್ತಿಲ್ಲ. ಏಳು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿರುವ ಎಂಬಿಎ ಎಂಸಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ ಮುಗಿಯುತ್ತಿದ್ದರು ವಿದ್ಯಾರ್ಥಿವೇತನ ದೊರೆಯದಿರುವುದನ್ನು ಖಂಡಿಸಿ ಇತ್ತೀಚೆಗಷ್ಟೇ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಚಳವಳಿ ನಡೆಸಲಾಗಿದೆ. ಕಳೆದ ಎರಡು ವರ್ಷಗಳಿಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಲಭಿಸದ ಕುರಿತು ಕಳೆದ ಆಗಸ್ಟ್‌ ನಲ್ಲಿ ಬಿ ಸಿ ಎಂ ಇಲಾಖೆ ಸಚಿವರಾದ ಶ್ರೀ ಶಿವರಾಜ್ ತಂಗಡಗಿಯವರನ್ನು ಭೇಟಿ ಮಾಡಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.  ರಾಜ್ಯದ ಹಲವೆಡೆ ವಿದ್ಯಾರ್ಥಿಗಳು ಎಐಡಿಎಸ್‌ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾರ್ಚ್‌ 6 ರಂದು ರಾಜ್ಯದ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ವೇತನದ ಹಕ್ಕಿನ ಕೂಗನ್ನು ಮೊಳಗಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ಮತ್ತೆ ರಾಜಧಾನಿ ಬೆಂಗಳೂರಿಗೆ ಧಾವಿಸಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಲಭ್ಯವಿರುವ ಮಾಹಿತಿಯ ಪ್ರಕಾರ ಸರ್ಕಾರ ಈ ಕ್ಷಣ ವಿದ್ಯಾರ್ಥಿ ವೇತನ ನೀಡಲು ಹಣದ ಕೊರತೆ ಎಂದು ಹೇಳುತ್ತಿದೆ. ವಿಶ್ವವಿದ್ಯಾಲಯಗಳು ಸರ್ಕಾರದಿಂದ ಹಣ ಮಂಜೂರಾಗಿಲ್ಲ ಎಂದು ಹೇಳುತ್ತಿವೆ. ಒಟ್ಟಾರೆ ಹೇಳುವುದಾದರೆ, ವಿದ್ಯಾರ್ಥಿ ವೇತನ ಒದಗಿಸುವಲ್ಲಿ ರಾಜ್ಯದ ವಿದ್ಯಾರ್ಥಿ ಸಮೂಹದ ಭವಿಷ್ಯದ ಕುರಿತಾದ ಕಾಳಜಿಯ ಕೊರತೆ ಇಲ್ಲಿ ಎದ್ದು ಕಾಣುತ್ತಿದೆ. ಆದ್ಯತೆಯ ಮೇರೆಗೆ ಸರ್ಕಾರವು ಶಿಕ್ಷಣಕ್ಕೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸಬೇಕು ಮತ್ತು ಎಲ್ಲ ವಿಭಾಗದ ಮತ್ತು ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಬೇಕೆಂದು ಈ ಮೂಲಕ ಎಐಡಿಎಸ್‌ಓ ಬಳ್ಳಾರಿ ಜಿಲ್ಲಾ ಸಮಿತಿಯು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ.ಪ್ರಕಟಣೆ ಇವರಿಂದ, ಕಂಬಳಿ ಮಂಜುನಾಥ ಜಿಲ್ಲಾ ಕಾರ್ಯದರ್ಶಿ 


ಸುದ್ದಿ ಓದಿ