ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ: ಮೀನಾಕ್ಷಿ ಬಣ್ಣದಭಾವಿ
In sports, participation is more important than winning or losing: Meenakshi Bannadabhavi
ಕೊಪ್ಪಳ, ಸೆ. 1: ಕ್ರೀಡಾ ಸ್ಪರ್ಧೆಗಳಲ್ಲಿ ಪ್ರತಿಯೊಬ್ಬರೂ ಭಾಗವಹಿಸುವುದು ಮುಖ್ಯ. ಸೋಲು-ಗೆಲುವು ಮುಖ್ಯವಲ್ಲ ಎಂದು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದಭಾವಿ ಹೇಳಿದರು. ನಗರ ಸಮೀಪದ ದದೇಗಲ್ ಗ್ರಾಮದಲ್ಲಿರುವ ಕ್ಲಬ್ನ ದತ್ತು ಪಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಕ್ಲಬ್ ವತಿಯಿಂದ ಬಹುಮಾನ ವಿತರಿಸಿ ಮಾತನಾಡಿದ ಅವರು, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಪ್ರತಿಯೊಬ್ಬರೂ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ಎಲ್ಲರೂ ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರೆ ಆರೋಗ್ಯವಂತ ಹಾಗೂ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ, ನಿಂಬೆ-ಚಮಚ ಓಟ ಸೇರಿದಂತೆ ವಿವಿಧ ಮೋಜಿನ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕ್ರೀಡಾ ಮನೋಭಾವ ಪ್ರದರ್ಶಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ಸುಮಾರು 20 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.
ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ಶ್ರೀದೇವಿ, ಎಡಿಟರ್ ಮಾಲಾ ಸೇರಿದಂತೆ ಕ್ಲಬ್ನ ಪದಾಧಿಕಾರಿಗಳು ಹಾಗೂ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದಕ್ಕೆ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದಭಾವಿ ಅಭಿನಂದನೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 