ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಚೇರಿ ಉದ್ಘಾಟನೆ
ಬೆಂಗಳೂರು 14: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಕಚೇರಿಯನ್ನು ಆರಿ್ಟ. ನಗರದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ ಅರುಮೋಘಮ್ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಮೌಲ್ಯಾಧಾರಿತ ರಾಜಕೀಯದ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ಬದ್ಧವಾಗಿದೆ ಎಂದು ಹೇಳಿದರು.ಸಂವಿಧಾನಿಕ ಸಂಸ್ಥೆಗಳು ಸಮರ್ಕವಾಗಿ ಜವಾಬ್ದಾರಿ ನಿರ್ವಹಿಸದ ಹಿನ್ನೆಲೆ ಜನರ ಜವಾಬ್ದಾರಿ ಹೆಚ್ಚಾಗಿದೆ. ಜನಸಾಮಾನ್ಯರು ನೈತಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಅಳವಡಿಸಿಕೊಳ್ಳಬೇಕು ಎಂದರು.ದೇಶದಲ್ಲಿ ದುರ್ಬಲ ವರ್ಗಗಳು ಮತ್ತು ಮಹಿಳೆಯರ ಭದ್ರತೆ ಕುಂಠಿತಗೊಂಡಿದ್ದು, ಮಹಿಳೆಯರ ಮೇಲೆ ನಡೆಯುತ್ತಿರುವ ಹಿಂಸಾಚಾರ ಗಂಭೀರ ವಿಷಯವಾಗಿದೆ.
ಈ ಕುರಿತು ಜನಜಾಗೃತಿ ಮೂಡಿಸಿ, ಮೌಲ್ಯಾಧಾರಿತ ನಾಯಕತ್ವವನ್ನು ಚುನಾವಣೆಯಲ್ಲಿ ಆಯ್ಕೆ ಮಾಡುವ ಅಗತ್ಯವಿದೆ ಎಂದು ಅವರು ತಿಳಿಸಿದರು.ಪಕ್ಷದ ರಾಜ್ಯಾಧ್ಯಕ್ಷರಾದ ವಕೀಲರು ತಾಹಿರ್ ಹುಸೇನ್ ಅವರು ಮಾತನಾಡಿ, ರಾಜ್ಯದಲ್ಲಿ ದಲಿತ, ಶೋಷಿತ, ಧಮನಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಪರ ಪಕ್ಷವು ನಿರಂತರ ಹೋರಾಟ ನಡೆಸಲಿದೆ ಎಂದರು. ರಾಜ್ಯದಲ್ಲಿ ಕೋಮು ವೈಮನಸ್ಸು ಸೃಷ್ಟಿಸುವ ಪ್ರಯತ್ನಗಳನ್ನು ಸರ್ಕಾರ ತಕ್ಷಣ ತಡೆಹಿಡಿಯಬೇಕು. ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಬೇಕು ಹಾಗೂ ಶೋಷಿತ ಸಮುದಾಯಪರ ಬಜೆಟ್ ಮಂಡನೆ ಮಾಡುವಂತೆ ರಾಜ್ಯ ಸರ್ಕಾರವನ್ನು ಅವರು ಆಗ್ರಹಿಸಿದರು.ಈ ಸಂದರ್ಭದಲ್ಲಿ:ಆರಿ್ಪ.ಐ ಪಕ್ಷದ ರಾಜ್ಯಾಧ್ಯಕ್ಷರು ಆರ್ ಮೋಹನ್, ಪಕ್ಷದ ಮುಖಂಡರು ಹಬೀಬುಲ್ಲ ಖಾನ್,ರಿಯಾಜ್ ಅಹಮದ್, ತಾಜುದ್ದೀನ್ ಇಲಕಲ್, ಉದ್ಯೋಮಿ ಜವಾದ್ ಮೊಹಮ್ಮದ್ ಪಕ್ಷದ ಪದಾಧಿಕಾರಿಗಳು ಇದ್ದರು.