ರಾಜ್ಯ ಶಾಸ್ತ್ರದ ಬೂಸ್ಟರ್ ಕ್ಲಾಸ್ ಉದ್ಘಾಟನೆ
Inauguration of State Science Booster Class
ಹೂವಿನಹಡಗಲಿ 22 : ಕಲಾ ವಿಭಾಗದ ವಿದ್ಯಾರ್ಥಿಗಳು ತಮ್ಮ ರಾಜ್ಯಶಾಸ್ತ್ರ, ಇತಿಹಾಸದಂತಹ ವಿಷಯಗಳನ್ನು ಕೇವಲ ಪರೀಕ್ಷಾ ದೃಷ್ಟಿಯಿಂದ ಓದದೇ, ಸ್ಪರ್ಧಾತ್ಮಕ ಜಗತ್ತಿನ ದೃಷ್ಟಿಯಿಂದ ಓದಿದಲ್ಲಿ ಉನ್ನತ ಹುದ್ದೆಗೆ ಪಡೆಯಬಹುದು ಎಂದು ಪ್ರಾಚಾರ್ಯ ಎ. ಕೊಟ್ರಗೌಡ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀಮತಿ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಬೂಸ್ಟರ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ ಬೂಸ್ಟರ್ ಕ್ಲಾಸ್ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ ಎಂದರು.ಹಿರೇಹಡಗಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಉತ್ತಂಗಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕಲ್ಲನಗೌಡ್ರ ಪ್ರಕಾಶ್ ಮಾತನಾಡಿ ಮಾದರಿ ಪ್ರಶ್ನೆಪತ್ರಿಕೆಗಳು ಬಳಸಿಕೊಂಡು ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವ ಸರಳ ಮಾರ್ಗಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾಲೇಜಿನ ಉಪನ್ಯಾಸಕರಾದ ಬಸೆಟ್ಟಿ ಪ್ರಕಾಶ್, ಗುರುಬಸವರಾಜ್, ಶಿವಕುಮಾರ್, ನಟರಾಜ್ ಪಾಟೀಲ್, ದುಷ್ಯಂತ, ಶ್ರೀಕಾಂತ್, ವೀರೇಶ್, ಮಂಜುನಾಥ್, ಆರತಿ, ಶಂಕರ್, ಪರಂಜ್ಯೋತಿ, ಉಮಾ, ರಶ್ಮಿ, ಪರಶುರಾಮ ನಾಗೋಜಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 