ನೂತನ ಕೊಠಡಿ, ಶಾಲೆ ಸೌಂದರ್ಯೀಕರಣ ಕಾಮಗಾರಿ ಉದ್ಘಾಟನೆ
Inauguration of new classroom and school beautification work
ನೂತನ ಕೊಠಡಿ, ಶಾಲೆ ಸೌಂದರ್ಯೀಕರಣ ಕಾಮಗಾರಿ ಉದ್ಘಾಟನೆ
ಬೆಳಗಾವಿ, 26; ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ವಿಜಯ ನಗರದಲ್ಲಿರುವ ಸರ್ಕಾರಿ ಪ್ರಾಥಮಿಕ ಕನ್ನಡ ಮತ್ತು ಮರಾಠಿ ಶಾಲೆಗಳಿಗೆ ಸುಣ್ಣ -ಬಣ್ಣ ಹಚ್ಚುವ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಚಾಲನೆ ನೀಡಿದರು.
ಇದೇ ಸಮಯದಲ್ಲಿ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಒಂದು ಹೆಚ್ಚುವರಿ ಕೊಠಡಿಯನ್ನು ಸಹ ಸಚಿವರು ಉದ್ಘಾಟಿಸಿದರು. ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಕ್ಷೇತ್ರದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿನಾಕ್ಷಿ ಹಿತ್ತಲಮನಿ, ಉಪಾಧ್ಯಕ್ಷರಾದ ಚೇತನಾ ಅಗಸ್ಗೇಕರ್, ವಿಠ್ಠಲ ದೇಸಾಯಿ, ಪ್ರವೀಣ ಪಾಟೀಲ, ರಾಹುಲ್ ಉರನಕರ್, ಅಶೋಕ ಕಾಂಬಳೆ, ಮಿಥುನ್ ಉಸೂಲ್ಕರ್, ಡಿ.ಬಿ.ಪಾಟೀಲ, ಗಜಾನನ ಬಾಂಡೇಕರ್, ಅಲ್ಕಾ ಕಿತ್ತೂರ್, ಸೀಮಾ ದೇವಕರ್, ಪ್ರೇರಣಾ ಮಿರಜಕರ್, ಮುಖ್ಯೋಪಾಧ್ಯಾಯರಾದ ಸರಳಾ ಕಡೆಮನಿ, ನಯನಾ ಕಿರ್ತನೆ ಮೊದಲಾದವರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 