ನೂತನ ಶಾಲಾ ಕೊಠಡಿಗಳ ಉದ್ಘಾಟನೆ
Inauguration of new school rooms
ಯಮಕನಮರಡಿ 19: ಸ್ಥಳೀಯ ಪ್ರಾಥಮಿಕ ಹಿರಿಯ ಹಾಗೂ ಕಿರಿಯ ಶಾಲೆಗಳ ಕೊಠಡಿಗಳ ಉದ್ಘಾಟನೆ ಕಾರ‌್ಯಕ್ರಮ ಜರುಗಿತು. ಸ್ಥಳೀಯ ಮತಕ್ಷೇತ್ರದ ಸಚಿವರಾದ ಸತೀಶ್ ಅಣ್ಣ ಜಾರಕಿಹೊಳಿ ಅವರು ತಮ್ಮ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಮೂರು ಶಾಲಾ ಕೊಠಡಿಗಳನ್ನು ಮಂಜೂರು ಮಾಡಿದ್ದು ಒಂದು ಹುಟ್ಟು ಶಾಲೆ ಎರಡು ಕನ್ನಡ ಪ್ರಾಥಮಿಕ ಶಾಲೆ ಇವುಗಳನ್ನು ಸ್ಥಳೀಯ ಹುಣಸಿಕೊಳ್ಳ ಮಠದ ಪೂಜ್ಯರಾದ ಸಿದ್ದ ಬಸವ ದೇವರು, ಉತ್ತರಾಧಿಕಾರಿಗಳು ಶೂನ್ಯ ಸಂಪಾದನ ಮಠ ಇವರು ಉದ್ಘಾಟಿಸಿದರು.
ಸಿದ್ಧಬಸವ ದೇವರು ಮಾತನಾಡುತ್ತ ಯಮುಕನಮರಡಿ ಮತಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸಲು ಸಚಿವರು ದಡ್ಡಿ ಗ್ರಾಮದಲ್ಲೂ ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ಶಾಲೆಗಳನ್ನು ಮಂಜೂರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಮುಂಬರುವ ದಿನಗಳಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾಗಿ ರಾಜ್ಯದ ಎಲ್ಲಾ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದು ಹೇಳುತ್ತಾ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಯುವ ಧುರೀಣರಾದ ಕಿರಣ್ ಸಿಂಗ್ ರಜಪುತ ಗುತ್ತಿಗೆದಾರರಾದ ವೀರಣ್ಣ ಬಿಸಿ ರೊಟ್ಟಿ, ಮಹೇಬೂಬ್ ಮುಜಾವರ್, ದೇವಪ್ಪ ಹುನ್ನೂರಿ, ಗುಮಚಿ ಮುಸ್ಲಿಂ ಸಮಾಜದ ಮುಖಂಡರಾದ ಶರೀಫ್ ಬೇಪಾರಿ ಸೇರಿದಂತೆ ಕ್ಷೇತ್ರ ಶಿಕ್ಷಣ ಇಲಾಖೆ ವತಿಯಿಂದ ಗೋವಿಂದ್ ದೀಕ್ಷಿತ್ ಹಾಗೂ ಸದಾಶಿವ್ ಎಲ್ಲ ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಕಾರ‌್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಮೀಪದ ಹಳೆ ಗುಡಗನಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾಥಮಿಕ ಹಿರಿಯ ಶಾಲೆಯನ್ನು ಗ್ರಾಮದ ಮುಖಂಡರಾದ ರಾಯ್ ಗೌಡ ಪಾಟೀಲ್ ಹಾಗೂ ಪಂಚಾಯತಿ ಸದಸ್ಯರು ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಸ್ಮ ಪನಿಬಂಧ ಸಿಬ್ಬಂದಿಗಳಾದ ಸಂತೋಷ್ ರಾವಲ್, ಶಾಂತಕುಮಾರ ಮಲಾಜಿ ಸೇರಿದಂತೆ ಎಲ್ಲ ಶಾಲೆಗಳ ಶಿಕ್ಷಕರು ಶಿಕ್ಷಕಿಯರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 