ಕಬ್ಬಿನ ಬೆಲೆ ನಿಗದಿಗಾಗಿ ಅನಿರ್ದಿಷ್ಟಾವಧಿ ಮುಷ್ಕರ
Indefinite strike for sugarcane price fixing
ಇಂಡಿ 03: ತಾಲೂಕಿನ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಆಗುವವರೆಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗಿದೆ ಎಂದು ರೈತ ಜಿಲ್ಲಾ ಅಧ್ಯಕ್ಷ ಹೇಳಿದರು. ಈ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಇಂಡಿ ತಾಲೂಕಿನ ಜೆಡಿಎಸ್ ಮುಖಂಡ ಬಿ ಡಿ ಪಾಟೀಲ ಅವರು ಮಾತನಾಡಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಕಬ್ಬಿಗೆ ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂಪಾಯಿ ಬೆಲೆ ನಿಗದಿ ಮಾಡಬೇಕು ಹಾಗೂ ಈ ಬಾರಿ ಸುರಿದ ಭಾರಿ ಮಳೆಯಿಂದ ರೈತರ ಬದುಕು ಮೂರಾಬಟ್ಟೆ ಆಗಿ ಹೋಗಿದೆ. ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಇವರಿಗೆ ಪರಿಹಾರ ನೀಡಿದೆ.ರೈತರೊಂದಿಗೆ ಚೆಲ್ಲಾಟವಾಡುತ್ತಿದೆ. ಹಾಗೂ ಪ್ರವಾಹ ಭೀತಿಯಿಂದ ಭೀಮಾ ತೀರದಲ್ಲಿ ಸುಮಾರು ಎಕರೆ ಕಬ್ಬು ಬೆಳೆ ಹಾಗೂ ಹತ್ತಿ ಮೆಕ್ಕೆಜೋಳ ತೊಗರಿ ಸೇರಿದಂತೆ ಅನೇಕ ಬೆಳೆಗಳು ಹಾನಿಯಾಗಿವೆ. ಹಾಗೂ ಅನೇಕ ಮನೆಗಳಿಗೆ ನೀರು ನುಗ್ಗಿ ಮನೆ ಕಳೆದುಕೊಂಡ ನೊಂದ ಫಲಾನುಭವಿಗಳಿಗೆ ಇನ್ನೂ ಮನೆ ಪರಿಹಾರ ನೀಡಿಲ್ಲ. ಆದರೆ ಸರ್ಕಾರ ಮಾತ್ರ ನವೆಂಬರ್ ಕ್ರಾಂತಿ ಡಿಸೆಂಬರ್ ಕ್ರಾಂತಿ ಹೇಳುತ್ತಾ ಜನರ ನಿದ್ದೆಗೆಡಿಸಿದೆ. ನಾವು ರೈತ ಪರ ಅಂತ ಹೇಳುವ ಕಾಂಗ್ರೆಸ್ ಪಕ್ಷ ರೈತರ ಜ್ಯೋತಿ ಚೆಲ್ಲಾಟ ಆಡುತ್ತಾ ಕಾಲ ಹರಣ ಮಾಡುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 