ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 16: ಸ್ವತಂತ್ರ ಹಾಗೂ ಸ್ವಾವಲಂಬಿಗಳಾಗಿ ಬದುಕುವಂತಹ ಅವಕಾಶಗಳು ದೇಶದ ಪ್ರತಿಯೊಬ್ಬ ಪ್ರಜೆಗೂ ದೊರೆಯಬೇಕು ಎಂದು ಕುನ್ನೂರ ಸಂಸ್ಥೆಯ ಅಧ್ಯಕ್ಷೆ ಸ್ನೇಹಲತಾ ಎಂ. ಕುನ್ನೂರ ಹೇಳಿದರು.
ಪಟ್ಟಣದ ಕುನ್ನೂರ ಇಂಟರನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾರತ ದೇಶ ಇಡಿ ವಿಶ್ವಕ್ಕೆ ಮಾನ್ಯವಾಗಬಹುದಾದ ಶ್ರೇಷ್ಠತೆಯನ್ನು ಹೊಂದಿದೆ. ಒಂದು ದೇಶ ಒಂದು ಕಾನೂನು ಮೂಲಕ ದೇಶದಲ್ಲಿ ಸಮಾನತೆಯನ್ನು ಸಾಧಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಕುನ್ನೂರ ಸಂಸ್ಥೆಯ ಕಾರ್ಯದರ್ಶಿ ರಾಜು. ಎಂ. ಕುನ್ನೂರ ಮಾತನಾಡಿ ಭಯೋತ್ಪಾದನೆ ನಮ್ಮ ದೇಶಕ್ಕಂಟಿದ ಶಾಪವಾಗಿದೆ ಅದನ್ನು ಹತ್ತಿಕ್ಕುವ ಮೂಲಕ ಭಾರತದ ಸಮಗ್ರತೆ ಹಾಗೂ ಏಕತೆಯನ್ನು ಎತ್ತಿ ಹಿಡಿಯುವುದರ ಜೊತೆಗೆ ದೇಶದ ಪ್ರತಿಯೊಬ್ಬ ನಾಗರಿಕರ ಆತ್ಮಗೌರವವನ್ನು ರಕ್ಷಿಸುವ ಕೆಲಸವಾಗಬೇಕಾಗಿದೆ ಎಂದರು.
ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ಕುನ್ನೂರ ಸಂಸ್ಥೆಯ ಅಧ್ಯಕ್ಷೆ ಸ್ನೇಹಲತಾ. ಎಂ. ಕುನ್ನೂರ ವಿತರಿಸಿ ಅಭಿನಂದಿಸಿದರು.
ಪ್ರಾಚಾರ್ಯ ಎಸ್.ಹೆಚ್.ಹಾವೇರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಈರಣ್ಣಾ ಬಡ್ಡಿ, ಶಿವಪುತ್ರಪ್ಪ ಜಕ್ಕಣ್ಣವರ, ಶಾಲೆಯ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳು ಸೇರಿದಂತೆ ಇತರರು ಉಪಸ್ಥಿತರಿದ್ದರು