ಇಂಡಿಗೋ ಅವ್ಯವಸ್ಥೆ: 4 ಫ್ಲೈಟ್ ಇನ್ಸ್ಪೆಕ್ಟರ್ಗಳ ವಜಾ
IndiGo chaos: 4 flight inspectors sacked
ನವದೆಹಲಿ: ಕಳೆದೆರಡು ವಾರದಿಂದ ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಕಾರ್ಯಾಚರಣೆಯಲ್ಲಿ ವಿಳಂಬ ಮತ್ತು ರದ್ದತಿಯಿಂದ ಉಂಟಾದ ಅವ್ಯವಸ್ಥೆಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಕಠಿಣ ಕ್ರಮಕ್ಕೆ ಮುಂದಾಗಿದೆ.
ಅದರಂತೆ ವಿಮಾನ ಕಾರ್ಯಾಚರಣೆಯ ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ತೋರಿದ ನಾಲ್ವರು ಫ್ಲೈಟ್ ಇನ್ಸ್ಪೆಕ್ಟರ್ಗಳನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ವಜಾ ಮಾಡಿದೆ. ವಜಾಗೊಂಡ ಈ ಅಧಿಕಾರಿಗಳು ಇಂಡಿಗೋದ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿ ಹೊತ್ತಿದ್ದರು ಎಂದು ಹೇಳಲಾಗಿದೆ.
ಇಂಡಿಗೋದಲ್ಲಿ ಉಂಟಾದ ಸಿಬ್ಬಂದಿ ಕೊರತೆ ಮತ್ತು ಹೊಸ ಕರ್ತವ್ಯ ನಿಯಮಗಳ ಅನುಷ್ಠಾನದ ವೈಫಲ್ಯದಿಂದಾಗಿ ದೇಶಾದ್ಯಂತ ಸಾವಿರಾರು ವಿಮಾನಗಳು ರದ್ದುಗೊಂಡು ಲಕ್ಷಾಂತರ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು. ಈ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸದಿರುವ ಕಾರಣಕ್ಕೆ ಈ ನಾಲ್ವರು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಾಲ್ಕು ಸದಸ್ಯರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯ ಮುಂದೆ ಇಂಡಿಗೋ ಸಿಇಒ ಸತತ ಎರಡು ದಿನಗಳ ಕಾಲ ಹಾಜರಾಗುವಂತೆ ಸೂಚಿಸಲಾಗಿದೆ. ಕಳೆದ ವಾರ ಸಾವಿರಾರು ವಿಮಾನಗಳು ರದ್ದುಗೊಂಡು ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ 'ಇಂಡಿಗೋ ಬಿಕ್ಕಟ್ಟಿ'ಗೆ ಮೂಲ ಕಾರಣಗಳನ್ನು ತಿಳಿಯಲು ಈ ಸಮಿತಿಯನ್ನು DGCA ರಚಿಸಿದೆ. ದೇಶೀಯ ವಿಮಾನ ಮಾರುಕಟ್ಟೆಯಲ್ಲಿ ಇಂಡಿಗೋ ಶೇ. 65ರಷ್ಟು ಪಾಲನ್ನು ಹೊಂದಿರುವುದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 