ಅಪರ ಜಿಲ್ಲಾಧಿಕಾರಿಗಳಿಂದ ಹಾಸ್ಟೆಲ್‌ಗಳ ಪರೀಶೀಲನೆ
Inspection of Hostels by Additional Collectors
ಅಪರ ಜಿಲ್ಲಾಧಿಕಾರಿಗಳಿಂದ ಹಾಸ್ಟೆಲ್‌ಗಳ ಪರೀಶೀಲನೆ
ಕಾರವಾರ 28 :ಅಪರ ಜಿಲ್ಲಾಧಿಕಾರಿ ಸಾಜೀದ್ ಅಹಮದ್ ಮುಲ್ಲಾ ಅವರು ಜಿಲ್ಲೆಯ, ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯಗಳು, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳು ಹಾಗೂ ಬಾಲಕರ ವಸತಿ ನಿಲಯಗಳಿಗೆ ಇತ್ತೀಚೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಎಲ್ಲಾ ವಸತಿ ನಿಲಯಗಳಲ್ಲಿ ನೈರ್ಮಲ್ಯ ಮತ್ತು ಸ್ವಚ್ಚತೆಯನ್ನು ಕಾಪಾಡಲು ಆದ್ಯತೆ ನೀಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಭವಿಷ್ಯದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಚಟುವಟಿಕೆಗಳನ್ನು ನಿಯಮಿತವಾಗಿ ನಡೆಯುವಂತೆ ನೋಡಿಕೊಳ್ಳುವಂತೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅಪರ ಜಿಲ್ಲಾಧಿಕಾರಿಗಳು, ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳಿಗಾಗಿ ಸರಕಾರ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು, ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ, ಉನ್ನತ ಸಾಧನೆಗಳನ್ನು ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 