ವಿಜೃಂಭಣೆಯಿಂದ ಮಾಯಕ್ಕಾದೇವಿ ಮೂರ್ತಿ ಪ್ರತಿಷ್ಠಾಪನೆ ಕಳಸಾರೋಹಣ
ಶೇಡಬಾಳ 03: ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಮಾಯಕ್ಕಾದೇವಿ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಶುಕ್ರವಾರ ದಿ. 2ರಂದು ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಈ ಧಾರ್ಮಿಕ ಕಾರ್ಯಕ್ರಮಕ್ಕೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಯುವಮುಖಂಡರಾದ ಶ್ರೀನಿವಾಸ ಪಾಟೀಲ ಆಗಮಿಸಿ ದೇವಿಯ ದರ್ಶನ ಪಡೆದುಕೊಂಡರು.
ಕಾಗವಾಡ ಮತ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವ ಶ್ರೀಮಂತ (ತಾತ್ಯಾ) ಪಾಟೀಲ ಅವರು ವಿಶೇಷ ಪ್ರಯತ್ನಿಸಿ ದೇವಸ್ಥಾನದ ಅಭಿವೃದ್ಧಿಗಾಗಿ ಸಹಕರಿಸಿದರಿಂದ ಶಾಸಕರ ಅನುಪಸ್ಥಿತಿಯಲ್ಲಿ ಯುವ ನಾಯಕರಾದ ಶ್ರೀನಿವಾಸ ಪಾಟೀಲರನ್ನು ದೇವಸ್ಥಾನದ ಕಮಿಟಿಯ ಅಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಪ್ರೀತಿಯಿಂದ ಸತ್ಕರಿಸಿ ಗೌರವಿಸಿದ್ದರು.
ಸ್ಥಳೀಯ ಮುಖಂಡರು, ಸ್ವಾಮೀಜಿಗಳು, ಶಿರಗುಪ್ಪಿ ಗ್ರಾಮ ಪಂಚಾಯತ್ ಎಲ್ಲ ಸದಸ್ಯರು, ದೇವಸ್ಥಾನದ ಕಮಿಟಿಯ ಎಲ್ಲ ಸದಸ್ಯರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು