ಹೂವಿನ ಹಡಗಲಿ

ಓದಿನಿಂದ ವೈಚಾರಿಕ ಅರಿವು ಮಕ್ಕಳಿಗಾಗಿ ಸಂವಿಧಾನ ಪುಸ್ತಕ ವಿತರಣೆ

ಓದಿನಿಂದ ವೈಚಾರಿಕ ಅರಿವು ಮಕ್ಕಳಿಗಾಗಿ ಸಂವಿಧಾನ ಪುಸ್ತಕ ವಿತರಣೆ

              ಹೂವಿನ ಹಡಗಲಿ 16:   ಓದಿನಿಂದ ವೈಚಾರಿಕ ಅರಿವು ಸಾಧ್ಯ ಎಂದು ಪತ್ರಕರ್ತ ಎಂ ದಯಾನಂದ ಹೇಳಿದರು. ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶಾಖಾ ಗ್ರಂಥಾಲಯ ಬೀಚಿ ಗ್ರಂಥಾಲಯ ಬೆಂಬಲಿಗರ ಬಳಗ ಸಿಂಚನ ಪ್ರಕಾಶನ ಸಹಯೋಗದಲ್ಲಿ ಭಾನುವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಾಣಿ ಪೆರಿಯೋಡಿ ರವರ ಮಕ್ಕಳಿಗಾಗಿ ಸಂವಿಧಾನ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಅವರ ಸಂವಿಧಾನ ಪಿತಾಮಹ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸತತ ಓದಿನಿಂದ ಉನ್ನತ ಸಾಧನೆ ಮಾಡಿದ್ದಾರೆ.

            ಇಂಥಹ ಮಹಾನೀಯರ ಅಧ್ಯಯನ ಶೀಲತೆ ಗುಣ ಅನುಸರಿಸಿರಿ ಎಂದು ಹೇಳಿದರು. ಪತ್ರಕರ್ತ ಬಿಚ್ಚುಗತ್ತಿ ಖಾಜಾ ಹುಸೇನ್ ಗ್ರಾಮೀಣ ಭಾಗಗಳ ಮಕ್ಕಳಿಗೆ ಸರ್ಕಾರ ಓದಲು ಪ್ರೋತ್ಸಾಹ ನೀಡುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಬೀಚಿ ಗ್ರಂಥಾಲಯ ಬೆಂಬಲಿಗರ ಬಳಗದ ಅಧ್ಯಕ್ಷ ಸುರೇಶ ಅಂಗಡಿ ಸಪ್ತಾಹದ ಅಂಗವಾಗಿ ಶಾಲಾ ಕಾಲೇಜು ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಓದಿನ ಮಹತ್ವ ತಿಳಿಸುವುದರ ಜೊತೆಗೆ ಪುಸ್ತಕ ವಿತರಿಸಲಾಗುವುದು ಎಂದು ತಿಳಿಸಿದರು. ಡಾ ಬಿ ಆರ್ ಅಂಬೇಡ್ಕರ್ ಗ್ರಂಥಾಲಯ ಪಿತಾಮಹ ಎಸ್ ಆರ್ ರಂಗನಾಥನ್ ರವರ ಕುರಿತು ಮಾಹಿತಿ ಹಂಚಿಕೊಂಡರು. ಶಾಖಾ ಗ್ರಂಥಾಲಯಾಧಿಕಾರಿ ಬಿ ನಾರಾಯಣ್ ದಾಸ್ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಮಲ್ಕಿ ಒಡೆಯರ್ ನಿಲಯ ಪಾಲಕರಾದ ಎಂ ಶಾಂತಕುಮಾರಿ ಇದ್ದರು. ನಿಲಯದ ಎಲ್ಲಾ ವಿದ್ಯಾರ್ಥಿನಿಯರಿಗೆ ಅಂಬೇಡ್ಕರ್ ಸಂವಿಧಾನ ಪುಸ್ತಕಗಳನ್ನು ವಿತರಿಸಲಾಯಿತು. 


ಸುದ್ದಿ ಓದಿ