ಅಂತರ ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮ
Inter District Youth Exchange Programme
ಅಂತರ ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮ
ಕಾರವಾರ,ಫೆ.3 :- ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಕಾರವಾರ ಉತ್ತರ ಕನ್ನಡ ಜಿಲ್ಲೆ ಹಾಗೂ ಹಾಸನ ಜಿಲ್ಲೆಯ ಅಂತರ ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾ.2 ರಿಂದ ಮಾ.6 ರ ವರೆಗೆ ಹಾಸನ ಜಿಲ್ಲೆಯಲ್ಲಿ ನಡೆಯುವ ಅಂತರ ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 27 ಯುವ ಜನರು ಪಾಲ್ಗೊಂಡಿದ್ದಾರೆ. ಸರಕಾರಿ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದಿಂದ 12, ದಿವೇಕರ ಮಹಾವಿದ್ಯಾಲಯದ11,ಶಿವಾಜಿ ಮಹಾವಿದ್ಯಾಲಯದ 2, ಅಂಜುಮಾನ್ ಮಹಾ ವಿದ್ಯಾಲಯದ 2 ಯುವ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಎಲ್ಲಾ ಮೈ ಭಾರತ ಕಾರ್ಯಕರ್ತರು ಮೊದಲಿಂದಲೂ ನೆಹರು ಯುವ ಕೇಂದ್ರ ಕಾರವಾರದ ವಿವಿಧ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಂಡಿರುತ್ತಾರೆ. ಫೆಬ್ರವರಿ 7 ರಿಂದ 11 ರವರೆಗೆ ಕಾರವಾರಕ್ಕೆ ಹಾಸನ ಜಿಲ್ಲೆಯಿಂದ 27 ಯುವ ಜನರು ಜಿಲ್ಲೆಗೆ ಆಗಮಿಸಿದ್ದು, 5 ದಿನಗಳ ಕಾಲ ಅಂತರ ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮನ್ನು ಯಶ್ವಸಿಯಾಗಿ ನಡೆಸಲಾಗಿತ್ತು ಎಂದು ನೆಹರು ಯುವ ಕೇಂದ್ರದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 