ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ “ಮಹಿಳಾ ಸಾಂಸ್ಕೃತಿಕ ಹಬ್ಬ-2026”
ವಿಜಯಪುರ 05 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಹಾಗೂ ವಿವಿಧ ನಿಕಾಯಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ‘ಎಲ್ಲಾ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗಾಗಿ: ಹಕ್ಕುಗಳು, ನ್ಯಾಯ ಮತ್ತು ಕ್ರಮ’ ಎಂಬ ವಿಷಯ ಆಧರಿತ“ ಮಹಿಳಾ ಸಾಂಸ್ಕೃತಿಕ ಹಬ್ಬ-2026” ಹಮ್ಮಿಕೊಳ್ಳಲಾಗಿದೆ. ಮಹಿಳಾ ಸಾಂಸ್ಕೃತಿಕ ಹಬ್ಬದ ಅಂಗವಾಗಿ ಮ್ಯಾರಾಥಾನ್, ಜುಂಬಾ, ಯೋಗ ತರಬೇತಿ, ಮಹಿಳಾ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮತ್ತು ಆಹಾರ ಮೇಳ, ಪೋಸ್ಟರ್ ಪ್ರಸೆಂಟೆಶನ್ ಸ್ಪರ್ಧೆ, ಕವಿಗೋಷ್ಠಿ, ಆರೋಗ್ಯ ತಪಾಸಣೆ, ವಿವಿಧ ಕಾರ್ಯಗಾರಗಳುರಾಷ್ಟ್ರೀಯ ಯ ವಿಚಾರ ಸಂಕೀರ್ಣಗಳು, ರಸಪ್ರಶ್ನೆ, ಭಾಷಣ, ಚಿತ್ರ ಕಲೆ ಸ್ಪರ್ಧೆ, ಉಪನ್ಯಾಸ, ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇದೇ ದಿ. 7 ರಿಂದ 12ರವರೆಗೆ ಬೆಳಿಗ್ಗೆ 10.30 ರಿಂದ ಸಾಯಂಕಾಲ 5:30ರವರೆಗೆ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಮೇಳ ಜರುಗಲಿದ್ದು, ದಿ. 8 ರಂದು ಬೆಳಿಗ್ಗೆ 6:30ಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಜುಂಬಾ, ಬೆಳಿಗ್ಗೆ 10:30ಕ್ಕೆ ಕನ್ನಡ ಭವನದಲ್ಲಿ ಅನುವಂಶಿಕ ಸಮಸ್ಯೆಗಳ ಕುರಿತು ಅರಿವು ಕಾರ್ಯಕ್ರಮ ಹಾಗೂ ಮಧ್ಯಾಹ್ನ 1 ಗಂಟೆಗೆ ಮಹಿಳಾ ದಿನಾಚರಣೆ ಸಂಭ್ರಮಾಚರಣೆ, ಮತ್ತು ದಿ. 8, 9, ಮತ್ತು 10 ರಂದು ಬೆಳಿಗ್ಗೆ 10:30 ಗಂಟೆಗೆ ಡಾ. ಬಿ ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳಾ ಸಾಂಸ್ಕೃತಿಕ ಹಬ್ಬ 2026ರ ಉದ್ಘಾಟನೆ ಹಾಗೂ ಮಹಿಳಾ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಹಾಗೂ ಪ್ರಸಾರಂಗ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ನಡೆಯಲಿದೆ.ದಿ. 9ರಂದು ಬೆಳಿಗ್ಗೆ 6:30ಕ್ಕೆ ಡಾ. ಬಿಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಯೋಗ, 10:30ಕ್ಕೆ ಡಾ. ಬಿಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಆಹಾರ ಮೇಳಗಳ ಉದ್ಘಾಟನೆ ಹಾಗೂ ಎಲ್ಲಾ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗಾಗಿ ಹಕ್ಕುಗಳು ನ್ಯಾಯ ಮತ್ತು ಕ್ರಮ ಕುರಿತು ವಿಚಾರ ಸಂಕೀರ್ಣ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದ್ದು, ದಿ. 8 ಮತ್ತು 9ರಂದು ಸಾಯಂಕಾಲ 6ರಿಂದ 8 ಗಂಟೆವರೆಗೆ ಡಾ. ಬಿಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ದಿ. 10 ರಂದು ಬೆಳಿಗ್ಗೆ 10.30 ಕ್ಕೆ ಮಹಿಳಾ ವಿವಿಯ ಆವರಣದ ಆರೋಗ್ಯ ಕೇಂದ್ರದಲ್ಲಿ ಥೈರಾಯ್ಡ್ ಆರೋಗ್ಯ ತಪಾಸಣೆ, ಬೆಳಿಗ್ಗೆ 10.30 ರಿಂದ ಸಾಯಂಕಾಲ 5:30ರ ವರೆಗೆ ಡಾ. ಬಿಆರ್ ಅಂಬೇಡ್ಕರ್ ಸಭಾಂಗಣದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಜರುಗಲಿದೆ. ದಿ. 11ರಂದು ಬೆಳಗ್ಗೆ 10:30 ರಿಂದ ಸಾಯಂಕಾಲ 5:30ರ ವರೆಗೆ ಮಹಿಳಾ ವಿವಿಯ ವಿಜ್ಞಾನ ಬ್ಲಾಕ್ನಲ್ಲಿ ವಿಜ್ಞಾನ ಪ್ರದರ್ಶನ ಹಾಗೂ ಕನ್ನಡ ಅಧ್ಯಯನ ವಿಭಾಗದಲ್ಲಿ ವೃತ್ತಿ ಪ್ರಗತಿ ಕಾರ್ಯಕ್ರಮ, ಮತ್ತು ಬೆಳಿಗ್ಗೆ 10.30 ಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯ ದೈಹಿಕ ಮಾನಸಿಕ ಆರೋಗ್ಯ ಮತ್ತು ಸ್ವಾಸ್ಥ್ಯ ಹಾಗೂ ಮಹಿಳಾ ಶಿಕ್ಷಣಕ್ಕೆ ಸಾವಿತ್ರಿಬಾಯಿ ಪುಲೆಯವರ ಕೊಡುಗೆಗಳು ವಿಷಯಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ದಿ. 12 ರಂದು ಬೆಳಿಗ್ಗೆ 10:30ಕ್ಕೆ ಡಾ. ಬಿಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ದೇವದಾಸಿ ಪದ್ಧತಿ ನಿರ್ಮೂಲನೆ ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಿಚಾರ ಸಂಕೀರ್ಣ ಕಾರ್ಯಕ್ರಮ ಜರುಗಲಿದೆ.ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಹಣಕಾಸು ಅಧಿಕಾರಿ ರಾಮಣ್ಣ ಎಸ್ ಅಥಣಿ, ಮಹಿಳಾ ಸಂಸ್ಕೊತಿಕ ಸದಸ್ಯ ಸಂಚಾಲಕಿ ಪ್ರೊ.ಲಕ್ಷ್ಮೀದೇವಿ ವೈ, ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಸಿಂಡಿಕೇಟ್ ಸದಸ್ಯರು ವಿದ್ಯಾವಿಷಯಕ ಪರಿಷತ್ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿವಿಧ ವಿಭಾಗದ ವಿದ್ಯಾರ್ಥಿನಿಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಕರು, ವಿವಿಧ ಸಂಘ ಸಂಸ್ಥೆಯವರು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಈ ಕಾರ್ಯಕ್ರಮಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಫ್ರೋ.ಲಕ್ಷ್ಮಿದೇವಿ ವೈ ತಿಳಿಸಿದ್ದಾರೆ.