ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
International Women's Day celebrated at Sri Krishnadevaraya University, Vijayanagar
ಲೋಕದರ್ಶನ ವರದಿ
ಮಹಿಳೆಯರ ದೃಢಸಂಕಲ್ಪ ಮತ್ತು ಶಕ್ತಿಯೇ ಸಮಾಜದ ಬುನಾದಿ: ಜೆ.ಜಯಲಕ್ಷ್ಮೀ
ಬಳ್ಳಾರಿ 07: ಇತಿಹಾಸದುದ್ದಕ್ಕೂ ಮಹಿಳೆಯರು ತಮ್ಮ ಅಪ್ರತಿಮ ದೃಢಸಂಕಲ್ಪ, ತ್ಯಾಗ ಮತ್ತು ಶಕ್ತಿಯ ಮೂಲಕ ಸಮಾಜವನ್ನು ರೂಪಿಸುತ್ತಾ ಬಂದಿದ್ದಾರೆ ಎಂದು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಜೆ. ಜಯಲಕ್ಷ್ಮೀ ಅವರು ಅಭಿಪ್ರಾಯಪಟ್ಟರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ, ವ್ಯಾಪಾರ, ವಿಜ್ಞಾನ, ಕಲೆ, ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ, ಕೆಲಸ ಮಾಡುತ್ತಿದ್ದಾರೆ. ಮನೆಗೆ ಬೆಳಕಾಗುವ ಹೆಣ್ಣು, ದೇಶದ ಅಭಿವೃದ್ಧಿಗೂ ಅಷ್ಟೇ ಪ್ರಮುಖ ಕೊಡುಗೆ ನೀಡುತ್ತಿದ್ದಾಳೆ ಎಂದು ತಿಳಿಸಿದರು.
ಮಹಿಳೆಗೆ ಇಂದು ಬೇಕಿರುವುದು ಕೇವಲ ಮೆಚ್ಚುಗೆಯಲ್ಲ, ಬದಲಾಗಿ ಸಮಾನ ಹಕ್ಕು ಮತ್ತು ಅವಕಾಶ. ಅದೇರೀತಿಯಾಗಿ ಶೋಷಿತ ಮಹಿಳೆಯರಿಗೆ ನ್ಯಾಯ ಒದಗಿಸಲು ಎಲ್ಲ ಮಹಿಳೆಯರು ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ಮುನಿರಾಜು ಅವರು ಮಾತನಾಡಿ, ಲಿಂಗ ಸಮಾನತೆಗಾಗಿ ಪ್ರತಿಪಾದಿಸುವುದರ ಜೊತೆಗೆ ಮಹಿಳೆಯರು ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯವಾಗಿ ಸದೃಢವಾಗಬೇಕಾಗಿದೆ ಎಂದು ಕರೆ ನೀಡಿದರು.
ಪ್ರಸ್ತುತದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆ ಮತ್ತು ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ವಿವಿಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಜೊತೆಗೆ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು.
ವಿಶ್ವವಿದ್ಯಾಲಯದ ನೂತನ ಹಣಕಾಸು ಅಧಿಕಾರಿಯಾದ ಕೆ.ಜಿ ಸ್ಪೂರ್ತಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕರಾದ ಶ್ರೀದೇವಿ ಆಲೂರು ಅತಿಥಿಗಳನ್ನು ಸ್ವಾಗತಿಸಿದರು. ಮಹಿಳಾ ಅಧ್ಯಯನ ವಿಭಾಗದ ಅತಿಥಿ ಉಪನ್ಯಾಸಕ ಸಿದ್ಧರಾಮಪ್ಪ ಪೂಜಾರಿ ನಿರೂಪಿಸಿ, ವಂದಿಸಿದರು.
ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ 