ಧಾರವಾಡ - ಹುಬ್ಬಳ್ಳಿ

ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ ಆಹ್ವಾನ

ಪ್ರಶಸ್ತಿಗಳಿಗಾಗಿ  ಪತ್ರಕರ್ತರಿಂದ ಲೇಖನಗಳ ಆಹ್ವಾನ

 ಪ್ರಶಸ್ತಿಗಳಿಗಾಗಿ  ಪತ್ರಕರ್ತರಿಂದ ಲೇಖನಗಳ ಆಹ್ವಾನ 

ಧಾರವಾಡ 29:   ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ  ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.  

ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ  ಅಭಿಮಾನಿ ಪ್ರಶಸ್ತಿ: ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ  ಮೈಸೂರು ದಿಗಂತ ಪ್ರಶಸ್ತಿ,  

ಬೆಂಗಳೂರಿನ ಅಭಿಮನ್ಯು  ಪತ್ರಿಕಾ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ, ಅಂಕಣ, ಸಂಪಾದಕೀಯ, ಪರಿಣಾಮಕಾರಿ ವರದಿಗೆ  ಅಭಿಮನ್ಯು ಪ್ರಶಸ್ತಿ:  ಬೆಂಗಳೂರಿನ  ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು  ಶೋಷಣೆಯನ್ನು ಪರಿಣಾಮ ಕಾರಿಯಾಗಿ  ಬಿಂಬಿಸುವ ಲೇಖನಕ್ಕೆ  ಪ್ರಜಾ ಸಂದೇಶ  ದತ್ತಿ ಪ್ರಶಸ್ತಿ ನೀಡಲಾಗುವುದು. ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ. 

2023 ನೇ ಸಾಲಿನ ಪ್ರಶಸ್ತಿಗಳು: 2023 ಜನವರಿಯಿಂದ ಡಿಸೆಂಬರ್‌-2023 ರವರೆಗೆ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಅಭಿಮಾನಿ ಪ್ರಶಸ್ತಿ-2023, ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ-2023 ಶೋಷಣೆಯನ್ನು ಪರಿಣಾಮ ಕಾರಿಯಾಗಿ  ಬಿಂಬಿಸುವ ಲೇಖನಕ್ಕೆ ಪ್ರಜಾ ಸಂದೇಶ ಪ್ರಶಸ್ತಿ-2023 ಹಾಗೂ  ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ, ಅಂಕಣ, ಸಂಪಾದಕೀಯ, ಪರಿಣಾಮಕಾರಿ ವರದಿಗೆ ಅಭಿಮನ್ಯು ದತ್ತಿ ಪ್ರಶಸ್ತಿ -2023 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು. 

2024 ನೇ ಸಾಲಿನ ಪ್ರಶಸ್ತಿಗಳು : 2024 ಜನವರಿ ಯಿಂದ ಸೆಪ್ಟೆಂಬರ್ 2024 ರವರೆಗೆ  ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಅಭಿಮಾನಿ ಪ್ರಶಸ್ತಿ-2024, ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ-2024 ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ ಪ್ರಜಾ ಸಂದೇಶ ಪ್ರಶಸ್ತಿ-2024  ಹಾಗೂ ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ, ಅಂಕಣ, ಸಂಪಾದಕೀಯ, ಪರಿಣಾಮಕಾರಿಯಾದ ವರದಿಗೆ ಅಭಿಮನ್ಯು ಪ್ರಶಸ್ತಿ-2024 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.  

ಕನ್ನಡ ದೈನಿಕಹಿಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಹೆಸರು (ಬೈಲೈನ್)  ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕ ರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ-ವರದಿಗಳನ್ನು ಇದೇ  ನವೆಂಬರ್ 20, 2024ರಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಭಿಮಾನಿ ಪ್ರಶಸ್ತಿ-2023, ಅಭಿಮಾನಿ ಪ್ರಶಸ್ತಿ-2024 ಹಾಗೂ ಮೈಸೂರು ದಿಗಂತ ಪ್ರಶಸ್ತಿ-2023, ಮೈಸೂರು ದಿಗಂತ ಪ್ರಶಸ್ತಿ-2024, ಪ್ರಜಾ ಸಂದೇಶ ಪ್ರಶಸ್ತಿ-2023, ಪ್ರಜಾ ಸಂದೇಶ ಪ್ರಶಸ್ತಿ-2024 ಹಾಗೂ ಅಭಿಮನ್ಯು ಪ್ರಶಸ್ತಿ -2023, ಅಭಿಮನ್ಯು ಪ್ರಶಸ್ತಿ-2024 ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್‌.ಅಂಬೇಡ್ಕರ್ ವೀದಿ, ಬೆಂಗಳೂರು-560001. ಇವರಿಗೆ ಕಳುಹಿಸಲು ಅಥವಾ  ಞಟಚಿಠಿಡಿಛಿಛಿಣಅರಟಚಿಟ.ಛಿಠ ಗೆ ಇ - ಮೇಲ್  ಮೂಲಕ ಕಳುಹಿಸಲು ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 



************ 

ವಾವಿಸಂ: 723/102 

ಮಕ್ಕಳ ರಕ್ಷಣಾ ಕಾರ್ಯಚರಣೆ; ಪೂರ್ವ ಕಿಶೋರ ಕಾರ್ಮಿಕ ಪತ್ತೆ  

ಧಾರವಾಡ 29: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ  ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಇಂದು (ಅ.29) ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆಯನ್ನು ಧಾರವಾಡ ಶಹರದಲ್ಲಿ ಕೈಗೊಳ್ಳಲಾಯಿತು. ಮತ್ತು ವಿವಿದೆಡೆ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.  

ಶಹರದಲ್ಲಿರುವ ಅಂಗಡಿ, ಗ್ಯಾರೇಜ್, ಬೇಕರಿ, ಹೋಟೆಲ್, ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು. ಹಾಗೂ ಸಂಸ್ಥೆಯ ಮಾಲಿಕರಿಗೆ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕ (ನೀಷೆಧ ಮತ್ತು ನಿಯಂತ್ರಣ) ಕಾಯ್ದೇ 1986 ರ ಕುರಿತು ಜಾಗೃತಿ ಮೂಡಿಸಲಾಯಿತು. ನಿಯಮ ಬಾಹಿರವಾಗಿ ಮಕ್ಕಳನ್ನು ನೇಮಿಸಿಕೊಂಡಲ್ಲಿ ರೂ. 20 ಸಾವಿರ  ರಿಂದ 50 ಸಾವಿರದ ವರೆಗೆ ದಂಡ, ಇಲ್ಲವೇ ಕನಿಷ್ಟ 6 ತಿಂಗಳಿಂದ ಎರಡು ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಮಾಲಿಕರಿಗೆ ಹಾಗೂ ಸಾರ್ವಜನಿಕರಿಗೆ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಯಿತು. 

ಈ ಸಂದರ್ಭದಲ್ಲಿ ಎನ್‌ಟಿಟಿಎಫ್ ಹತ್ತಿರದ ರಿಚ್ ಆಟೋ ಸ್ಪಾ ಗ್ಯಾರೇಜನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕ ಪತ್ತೆ ಆಗಿದ್ದು, ಆ ಮಗನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರಪಡಿಸಲಾಗಿದೆ.  

ಈ ಕಾರ್ಯಚರಣೆಯಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ  ಸದಸ್ಯ ಕಾರ್ಯದರ್ಶಿ ಪರಶುರಾಮ ಪಿ ದೊಡ್ಡಮನಿ, ಕಾರ್ಮಿಕ ಅಧಿಕಾರಿ ಮಾರಿಕಾಂಬ ಹುಲಕೋಟಿ, ಹಿರಿಯ ಕಾರ್ಮಿಕ ನೀರೀಕ್ಷಕಿ ಭುವನೇಶ್ವರಿ ಕೋಟಿಮಠ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮಿ, ಯೋಜನಾ ನಿರ್ದೇಶಕ ಬಸವರಾಜ ಸಿ ಪಿ, ಪೊಲೀಸ್ ಸಿಬ್ಬಂದಿ ಬಸವರಾಜ ಕುಂಬಾರಗೊಪ್ಪ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಾಮಾಜಿಕ ಕಾರ್ಯಕರ್ತ ಕರಿಯಪ್ಪ ಕೌಜಲಗಿ ಅವರು ಭಾಗವಹಿಸಿದ್ದರು. 

(ಫೋಟೋ ಇದೆ) 


ಸುದ್ದಿ ಓದಿ